ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸತತ ಮೂರು ದಿನಗಳಿಂದ ವಿಚಾರಣೆ ನಡೆಸುತ್ತಿರುವ ಇ ಡಿ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲವಾಗಿದೆ.
ರಾಜ್ಯದಲ್ಲಿ ಕೈ ನಾಯಕರಿಂದ ಇಂದು ರಾಜಭವನ ಚಲೋ ಆರಂಭಿಸಲಾಗಿದ್ದು ರಾಜಭವನಕ್ಕೆ ಮುತ್ತಿಗೆ ಹಮ್ಮಿಕೊಂಡಿರುವ ರಾಜ್ಯ ಕಾಂಗ್ರೆಸ್ ನಾಯಕರು ಕೆಪಿಸಿಸಿ ಕಚೇರಿಯಿಂದ ರಾಜಭವನದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಪಕ್ಷದ ಶಾಸಕರು,ಸಂಸದರು ಎಲ್ಲರೂ ಭಾಗವಹಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಹಾಗೂ ದೆಹಲಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಇತ್ತೀಚೆಗೆ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಸಂಸದ ಡಿ. ಕೆ. ಸುರೇಶ್ ಹಾಗೂ ಶಾಸಕ ದಿನೇಶ್ ಗುಂಡೂರಾವ್ ಅವರನ್ನು ಬಂಧಿಸಲಾಗಿತ್ತು.