ಬೆಳಗಾವಿ: ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ ಎಸಿಬಿ ಅಧಿಕಾರಿಗಳನ್ನ ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿ ಮೂವರು ಆರೋಪಿಗಳ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಚಿಕ್ಕೋಡಿಯ ಸದಲಗಾ ಪಟ್ಟಣದ ಮುರುಗೆಪ್ಪ ಪೂಜಾರ, ಬಸ್ತವಾಡ ಗ್ರಾಮದ ರಾಜೇಶ್ ಚೌಗುಲೆ, ಹಾಸನದ ಸಕಲೇಶಪುರ ಮೂಲದ ರಜನೀಕಾಂತ್ ಬಂಧಿತರು, ಇವರು ಆರ್ .ಟಿ.ಒ, ಸಬ್‍ರಜಿಸ್ಟಾರ್, ಕಂದಾಯ ಇಲಾಖೆ ಅಧಿಕಾರಿಗಳಿಗೆ ಹೆದರಸಿ ವಂಚನೆ ಮಾಡಿರುವುದಾಗಿ ತಿಳಿದುಬಂದಿದೆ.
ಎಸಿಬಿ ಅಧಿಕಾರಿಗಳು ಎಂದು ಸರ್ಕಾರಿ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ಖದೀಮರು ತಮ್ಮ ಖಾತೆಗ ಹಣ ವರ್ಗಾವಣೆ ಮಾಡುವಂತೆ ತಪ್ಪಿದಲ್ಲಿ ಕಚೇರಿಯ ಕಡತಗಳನ್ನು ಪರಿಶೀಲನೆ ಮಾಡುವ ಬೆದರಿಕೆಯಾಕುತ್ತಿದ್ದರು ಎಂದು ತಿಳಿಸಿದ್ದಾರೆ.
ಸೈಬರ್ ಕ್ರೈಂ ಪೊಲೀಸ್ ಠಾಣೆಯ ಸಿಪಿಐ ಗಡ್ಡೇಕರ್ ನೇತೃತ್ವದ ತಂಡ ಖದೀಮರ ಜಾಲವನ್ನು ಬೇಧಿಸಿದ್ದು, ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.