ಮಂಡ್ಯ : ಒಂಟಿ ಮಹಿಳೆಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ, ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿಯಲ್ಲಿ ನಡೆದಿದೆ, ಒಂಟಿ ಮಹಿಳೆಯ ಮನೆಗೆ ನುಗ್ಗಿರುವ ಅಪರಿಚಿತರು ಭೀಕರವಾಗಿ ಹತ್ಯೆಗೈದಿದ್ದಾರೆ.
ಪುಷ್ಪಲತಾ (45) ಕೊಲೆಯಾದ ಒಂಟಿ ಮಹಿಳೆ, ಕಳೆದ 10 ವರ್ಷದ ಹಿಂದೆ ಪತಿ ಕಾರ್ತಿಕ್ ತೀರಿ ಹೋಗಿದ್ದರು. ಆಗಿನಿಂದ ಒಂಟಿಯಾಗಿ ವಾಸ ಮಾಡಿಕೊಂಡಿದ್ದ ಮಹಿಳೆ ಜೀವನ ನಡೆಸಲು ಮೆಡಿಕಲ್ ಸ್ಟೋರ್ ನಡೆಸುತ್ತಿದ್ದರು.
ಪುಷ್ಪಲತಾ ನಿನ್ನೆ ಮಧ್ಯಾಹ್ನ ಊಟಕ್ಕೆಂದು ಮನೆಗೆ ತೆರಳಿದ್ದಾಗ ಕೊಲೆಯಾಗಿದ್ದಾರೆ, ತಾಯಿ ಎಷ್ಟು ಹೊತ್ತಾದರೂ ಮೆಡಿಕಲ್ ಸ್ಟೋರ್ ಗೆ ಬಾರದ ಹಿನ್ನೆಲೆ ಪುಷ್ಪಲತಾ ಪುತ್ರ ಮನೆಗೆ ತೆರಳಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ತಲೆಗೆ ಹಾಗೂ ಕತ್ತಿನ ಭಾಗಕ್ಕೆ ಚಾಕುವಿನಿಂದ ಇರಿದು ಹತ್ಯೆಮಾಡಿದ್ದು ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಶಂಕೆಯಿದ್ದು ಅರ್ಧಂಬರ್ಧ ಬಟ್ಟೆಯಲ್ಲಿ ಮೃತ ದೇಹ ಪತ್ತೆಯಾಗಿದ್ದು ಅತ್ಯಾಚಾರವೆಸಗಿರುವ ಬಗ್ಗೆ ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿ ಕೊಟ್ಟಿದೆ.
ಆರೋಪಿಗಳಿಗಾಗಿ ಪೊಲೀಸರಿಂದ ಶೋಧಕಾರ್ಯ ಕಾರ್ಯ ಮುಂದುವರೆದಿದ್ದು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.