ಅಭಿಮಾನಿಗಳ ಪ್ರೀತಿಯ ಕಿಚ್ಚ, ಸ್ಯಾಂಡಲ್ ವುಡ್ ನ ಬಾದ್ ಷಾ ಎಂದೇ ಖ್ಯಾತಿ ಪಡೆದಿರುವ ಸುದೀಪ್ ಕನ್ನಡ, ತೆಲುಗು, ತಮಿಳು, ಹಿಂದಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ನಟಿಸುವ ಮೂಲಕ ಕೊಟ್ಯಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ.
ಸದ್ಯ ಉದ್ಯಾನನಗರಿಯಲ್ಲಿರುವ ಸುದೀಪ್ ಅವರ ಕುಟುಂಬ ಮೂಲತಃ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರದಿಂದ ಶಿವಮೊಗ್ಗಕ್ಕೆ ವಲಸೆ ಬಂದಿತ್ತು, ನಂತರ ಬೆಂಗಳೂರಿನ ದಯಾನಂದ ಸಾಗರ್ ಕಾಲೇಜ್ ಆಫ್ ಇಂಜಿನಿಯರಿಂಗ್‌ನಲ್ಲಿ ಕೈಗಾರಿಕಾ ಮತ್ತು ಉತ್ಪಾದನಾ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದ ಅವರು ಮುಂಬೈನ ರೋಷನ್ ತನೇಜಾ ಸ್ಕೂಲ್ ಆಫ್ ಆಕ್ಟಿಂಗ್‌ನಲ್ಲಿ ವ್ಯಾಸಂಗ ಮಾಡಿದ್ದರು.
ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ್ದು ಸ್ಪರ್ಶ ಚಿತ್ರದ ಮೂಲಕ ನಂತರ ವಾಲೀ, ಚಂದು, ರಂಗ ಎಸ್ ಎಸ್ ಎಲ್ ಸಿ , ನಲ್ಲ, ಶಾಂತಿ ನಿವಾಸ, ವೀರ ಮದಕರಿ, ಕೆಂಪೇಗೌಡ ಸೇರಿದಂತೆ ಹಲವಾರು ಬ್ಲಾಕ್ ಬಾಸ್ಟರ್ ಸಿನಿಮಾಗಳ ಮೂಲಕ ಅಭಿಮಾನಿಗಳಿಗೆ ರಸದೌತಣ ನೀಡಿದ್ದಾರೆ.
ರಾಜಮೌಳಿ ನಿರ್ದೇಶಿಸಿದ ಬಾಹುಬಲಿ ಸಿನಿಮಾದಲ್ಲಿ ಪರ್ಷಿಯನ್ ಶಸ್ತ್ರಾಸ್ತ್ರ ವ್ಯಾಪಾರಿಯಾಗಿ ಅತಿಥಿ ಪಾತ್ರವನ್ನು ನಿರ್ವಹಿಸಿದ್ದಾರೆ ಈ ಮೂಲಕ ಸುದೀಪ್ ಚಿತ್ರರಂಗದಲ್ಲಿ 26 ವರ್ಷ ಪೂರೈಸಿದ್ದಾರೆ.
ನಟ ಕಿಚ್ಚ ಸುದೀಪ್ ಅವರ ಮುಂಬರುವ ಚಿತ್ರ ವಿಕ್ರಾಂತ್ ರೋಣ ಅನುಪ್ ಭಂಡಾರಿ ನಿರ್ದೇಶಿಸಲಿದ್ದು ಹಾಡು ಸಖತ್ ಸದ್ದು ಮಾಡುತ್ತಿರುವ ಸ್ಯಾಂಡಲ್ ವುಡ್ ನಲ್ಲಿ ವಿಕ್ರಾಂತ್ ರೋಣನ ಅಬ್ಬರ ಶುರುವಾಗಿದೆ.
ಸಿನಿಮಾದೆ ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಸುದೀಪ್ ಕೋವಿಡ್ ಸಂದರ್ಭದಲ್ಲಿ ಹಲವಾರು ಮಾನವೀಯ ಕಾರ್ಯಗಳಲ್ಲಿ ತೊಡಗಿದ್ದಾರೆ. ಟ್ರಸ್ಟ್ ಹಿಂದುಳಿದ ಶಾಲಾ ಮಕ್ಕಳಿಗೆ ಸಹಾಯ ಮಾಡುತ್ತಿದೆ, ಅವರಿಗೆ ಸಮವಸ್ತ್ರ ಮತ್ತು ವಿದ್ಯಾರ್ಥಿವೇತನವನ್ನು ನೀಡುತ್ತಿದೆ.