ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿಗೆ ಪ್ರಶ್ನೆ ಮಾಡಿದ ಸಿದ್ದರಾಮಯ್ಯ

ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ? ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದರೆ.

ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟುಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ?

ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ ಬಿಜೆಪಿ ಸರ್ಕಾರ ದಿವಾಳಿಯಾಗಿದೆಯೇ? ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ.

ಹೊಸ ಸೇನಾ ನೇಮಕಾತಿ ಅಗ್ನಿಪಥ್ ಕೇವಲ ಸೇನಾ ನೇಮಕಾತಿಗಷ್ಟೇ ಸೀಮಿತವಾಗಲಾರದು. ಸೈನಿಕರ ಅನ್ನ ಕಸಿಯಲು ಹೊರಟಿರುವ ಈ ದೇಶದ್ರೋಹಿ, ಜನವಿರೋಧಿ ಬಿಜೆಪಿ ಸರ್ಕಾರ ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ಉದ್ಯೋಗಗಳ ಮೇಲೆಯೂ ಸವಾರಿ ಮಾಡಲು ಹೊರಡುವುದು ಖಚಿತ. ಎಚ್ಚೆತ್ತುಕೊಳ್ಳಲು ಇದು ‘ಸಕಾಲ’!

ಪಾಠ ಕಲಿಸಲು ದೇಶದ ಜನತೆ ಮುಂದಾಗಬೇಕು

ರೈತರ ಬದುಕು ನಾಶ ಮಾಡಲು ಕರಾಳ ಕೃಷಿ ಕಾಯ್ದೆಗಳನ್ನು ತಂದಿದ್ದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೇಶದ ಜನ ಪಾಠ ಕಲಿಸಿದ್ದಾರೆ. ಈಗ ಯುವಜನರ ಬದುಕು ನಾಶದ ಜೊತೆಯಲ್ಲಿ ಸೈನಿಕರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವವರಿಗೂ ಪಾಠ ಕಲಿಸಲು ದೇಶದ ಜನತೆ ಮುಂದಾಗಬೇಕು ಎಂದು ಸಿದ್ದರಾಮಯ್ಯ ಅವರು ಕರೆ ಕೊಟ್ಟಿದ್ದಾರೆ.

Discover more from Valmiki Mithra

Subscribe now to keep reading and get access to the full archive.

Continue reading