ಬೆಂಗಳೂರು : ರಾಜ್ಯಾದ್ಯಂತ ಬಹು ಸುಗಮವಾಗಿ ನಡೆದಿದ್ದ , ಬಹು ನಿರೀಕ್ಷಿತ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಜೂನ್ 18 ರಂದು ಪ್ರಕಟವಾದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದ್ದಾರೆ .
ಕಳೆದ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು, ರಾಜ್ಯದಲ್ಲಿ ಒಟ್ಟು 6.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು, ಇವರಲ್ಲಿ 61 ಸಾವಿರ ಪುನರಾವರ್ತಿತ ವಿದ್ಯಾರ್ಥಿಗಳು ಸೇರಿದ್ದರು. 21 ಸಾವಿರ ಖಾಸಗಿ ವಿದ್ಯಾರ್ಥಿಗಳು , 2200 ವಿಕಲಚೇತನ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಕಳೆದ ವಾರವಷ್ಟೇ ಮೌಲ್ಯಮಾಪನ ಮುಕ್ತಾಯವಾಗಿತ್ತು .
ತಮ್ಮ ಉನ್ನತ ವಿದ್ಯಾಭ್ಯಾಸದ ಕನಸನ್ನು ಹೊತ್ತಿರುವ ವಿದ್ಯಾರ್ಥಿಗಳು ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜಿನಲ್ಲಿ ಕನಸನ್ನು ಪಡೆಯುವವರೆಗೆ ಸಿಟಿ ಪರೀಕ್ಷೆಯನ್ನು ಎದುರಿಸುತ್ತಿದ್ದಾರೆ, ಇದರ ಜೊತೆಗೆ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕಗಳು ಬರುವ ನಿರೀಕ್ಷೆಯಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳು.