ಹಾವೇರಿ: ಕಾಂಗ್ರೆಸ್ ನವರು ಬಿಜೆಪಿಯ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ವಿಜಯೇಂದ್ರ ಸಹ ಜೈಲಿಗೆ ಹೋಗುವ ಸಮಯ ಬರುತ್ತದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಬಿಜೆಪಿ ನಾಯಕರಾದ ಯಡಿಯೂರಪ್ಪ ಮತ್ತು ಅವರ ಮಗ ದುಬೈ ಮತ್ತು ಮಾರಿಷಸ್ ಸೇರಿದಂತೆ ವಿವಿಧ ದೇಶಗಳಲ್ಲಿ ಆಸ್ತಿ ಮಾಡಿದ್ದಾರೆ, ಆದ್ದರಿಂದಲೇ ವಿಜಯೇಂದ್ರ ಆಗಾಗ ಆ ದೇಶಗಳಿಗೆ ಹೋಗಿ ಬರುತ್ತಾರೆ ಎಂದು ತಿಳಿಸಿದರು.
ಕೆಲವು ಸ್ವಾಮೀಜಿಗಳು 10 ಕೋಟಿ ರೂಪಾಯಿ ಹಣ ಪಡೆದು ಪಂಚಮಸಾಲಿ ಮೀಸಲಾತಿ ಹೋರಾಟ ಮಾಡುವುದನ್ನು ಬಿಟ್ಟು ಸುಮ್ಮನಿದ್ದಾರೆ, ಆದರೆ ಸಮಾಜದ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳು ಕೂಡ ಕಟ್ಟಕಡೆಯ ಹಳ್ಳಿಗೆ ಹೋಗಿ ಹೋರಾಟ ಮಾಡಿಲ್ಲ ಎಂದರು.
ಬಿ. ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಮಠಕ್ಕೆ ಹತ್ತು ಕೋಟಿ ಅನುದಾನದಲ್ಲಿ ಸಹ ಅವ್ಯವಹಾರವಾಗಿದೆ, ಇದನ್ನು ವಿಧಾನಸಭೆ ಕಲಾಪದಲ್ಲಿ ಬಹಿರಂಗಗೊಳಿಸುವುದಾಗಿ ಯತ್ನಾಳ್ ಹೇಳಿದರು.
ಸ್ವಾಮೀಜಿಗಳ ಹೋರಾಟ ಜೋರಾಗುತ್ತಿದೆ ನಮ್ಮ ಒಬ್ಬ ಸ್ವಾಮೀಜಿ ಮನವಿ ಪತ್ರ ಎಂದು ತಿಂಗಳ ಪರೋಕ್ಷವಾಗಿ ವಚನಾನಂದ ಸ್ವಾಮೀಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ಈ 22ರಂದು ಮೀಸಲಾತಿ ಸಂಬಂಧ ಸ್ಪಷ್ಟ ನಿಲುವು ವ್ಯಕ್ತಪಡಿಸುತ್ತಾರೆ ಎಂಬ ವಿಶ್ವಾಸವಿದೆ. 22ರ ನಂತರ ಹೋರಾಟದ ರೂಪುರೇಷೆ ಬಗ್ಗೆ ನಿರ್ಣಯ ಆಗಲಿದೆ ಎಂದರು.
ಬ್ರಿಟನ್‌ನ ರಾಣಿಯ ನಂತರ ಸೋನಿಯಾ ಗಾಂಧಿಯೇ ದೊಡ್ಡ ಶ್ರೀಮಂತೆ , ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಇಡಿ ತನಿಖೆ ಮಾಡಲು ಕೇಂದ್ರ ಸರ್ಕಾರ ಒತ್ತಡವನ್ನು ಹಾಕಿಲ್ಲ ಬದಲಿಗೆ ಸುಪ್ರೀಂ ಆದೇಶದಂತೆ ಇಡಿ ತನಿಖೆ ನಡೆಯುತ್ತಿದೆ ಎಂದರು.
ಹಾವೇರಿ: ಕಾಂಗ್ರೆಸ್ ನವರು ಬಿಜೆಪಿಯ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ವಿಜಯೇಂದ್ರ ಸಹ ಜೈಲಿಗೆ ಹೋಗುವ ಸಮಯ ಬರುತ್ತದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೊಸ ಬಾಂಬ್ ಸಿಡಿಸಿದ್ದಾರೆ.