ಮಂಗಳೂರು: ಬಿಬಿಎ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ನಗರದ ಹೊರಲವಯದಲ್ಲಿರುವ ಬಗಂಬಿಲದಲ್ಲಿ ಘಟನೆ ನಡೆದಿದೆ. ಮಂಗಳೂರಿನ ಶ್ರಿದೇವಿ ಕಾಲೇಜಿನ ಹರ್ದೀಪ್ (20) ಮೃತ ಬಿಬಿಎ ವಿದ್ಯಾರ್ಥಿ. ಬಗಂಬಿಲದ ಮನೆಯಲ್ಲಿ ಯಾರು ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆಯಲ್ಲಿನ ಸಾಲದ ಬಗ್ಗೆ ಅರಿತು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಮಂಗಳೂರಿನಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ ಹೆಚ್ಚಾಗುತ್ತಿದ್ದು, ಈ ಸಂಬಂಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.