ಹುಬ್ಬಳ್ಳಿ: ಬಿಜೆಪಿ ಸರ್ಕಾರ ಸಂಪೂರ್ಣ ಪಾರದರ್ಶಕ ಆಡಳಿತ ನೀಡುತ್ತಿದೆ. ಕಾಂಗ್ರೆಸ್ ಪಕ್ಷ ಅಸ್ತಿತ್ವ ಕಳೆದುಕೊಂಡು ಈ ರೀತಿ ಆರೋಪ ಮಾಡುತ್ತಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಲಾಭಕ್ಕಾಗಿ ಆಗಮಿಸುತ್ತಿರುವುದು ಎನ್ನುವ ಆರೋಪದ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಯೋಗ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗಿಯಾಗಲಿದ್ದಾರೆ. ಅದು ರಾಜ್ಯಕ್ಕೆ ಶಕ್ತಿ. ಇಂಥ ವಿಚಾರದಲ್ಲಿ ಕಾಂಗ್ರೆಸ್ ಈ ರೀತಿಯ ಟೀಕೆ ಮಾಡುವ ಕೆಲಸ ನೋಡಿ ನೈತಿಕ ದಿವಾಳಿತನ ತೋರಿಸುತ್ತಿದೆ ಎಂದರು .
ಕಾಂಗ್ರೆಸ್ ಇಷ್ಟು ವರ್ಷ ಕೆಲಸ ಮಾಡಿಲ್ಲಾ, ಕಾಂಗ್ರೆಸ್ನ ಸಾಕಷ್ಟು ಪ್ರಧಾನಿಗಳು ಇದ್ದರೂ ರಾಜ್ಯದ ಬಗ್ಗೆ ಕೇಳಿಲ್ಲ. ತನಿಖೆ ವಿಚಾರದಲ್ಲಿ ಬೀದಿಗಿಳಿದು ಹೋರಾಟ ಮಾಡುವ ಇಂಥವರಿಂದ ಹೇಳಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.