ಬೆಂಗಳೂರು: ಬಹಳ ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದು ನಾಳೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುವ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ, ಆದ್ದರಿಂದ ಸಿಲಿಕಾನ್ ಸಿಟಿಯಲ್ಲಿ ಖಾಕಿ ಕಣ್ಗಾವಲು ಹಾಕಿದೆ.
ಮೋದಿ ಓಡಾಡೋ ರಸ್ತೆ ರಸ್ತೆಯಲ್ಲೂ ಖಾಕಿ ಕಣ್ಗಾವಲು ಇದ್ದು, 10 ಸಾವಿರದಷ್ಟು ಪೊಲೀಸ್ ಭದ್ರತೆಯಲ್ಲಿ ಮೋದಿ ಓಡಾಟ ಇರಲಿದ್ದು ಇಬ್ಬರು ಹೆಚ್ಚುವರಿ ಆಯುಕ್ತರು, ಇಬ್ಬರು ಜಂಟಿ ಪೊಲೀಸ್ ಆಯುಕ್ತರು, 12 ಡಿಸಿಪಿಗಳು, 30 ಎಸಿಪಿಗಳು, 80 ಇನ್ಸ್ ಪೆಕ್ಟರ್ ಗಳು, ಸೇರಿದಂತೆ ಕೆಎಸ್ ಆರ್ ಪಿ, ಸಿಎಆರ್ ಪಡೆ, ಗರುಡ ಪಡೆ ಗಳನ್ನ ನಿಯೋಜಿಸಲಾಗಿದೆ.
11:15 ಕ್ಕೆ ಯಲಹಂಕ ವಾಯು ನೆಲೆಗೆ ಬಂದಿಳಿದಿರುವ ಮೋದಿ ನಂತರ ಮಲ್ಲೇಶ್ವರಂ ಬಳಿಯಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆ ಗೆ ಮೊದಲಿಗೆ ಆಗಮಿಸಲಿದ್ದಾರೆ, ನಂತರ ಜ್ಞಾನ ಭಾರತಿ ಡಾ. ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ ಗೆ, ಜ್ಞಾನ ಭಾರತಿಯಿಂದ ಕೆಂಗೇರಿ ಸಮೀಪದ ಕೊಮ್ಮಘಟ್ಟದಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದು ನಂತರ ಮೈಸೂರಿಗೆ ತೆರಳಲಿದ್ದಾರೆ.
ಬಹಳ ದಿನಗಳ ನಂತರ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಘಟಕ ಹಾಗೂ ಕಾರ್ಯಕರ್ತರ ಹುಮ್ಮಸ್ಸು ಹೆಚ್ಚಾಗಿದೆ, ಮುಂದಿನ ವರ್ಷ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಅನುದಾನ ಹಾಗೂ ಹೊಸ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.