ವಿದ್ಯುತ್ ದರ ಏರಿಕೆ ವಿರುದ್ದ ಮಾಜಿ ಸಿಎಂ ಹೆಚ್​​.ಡಿ  ಕುಮಾರಸ್ವಾಮಿ ಕಿಡಿ

ಬೆಂಗಳೂರು: ರಾಜ್ಯ ಸರ್ಕಾರದ ವಿದ್ಯುತ್ ದರ ಏರಿಕೆ ವಿರುದ್ದ ಮಾಜಿ ಸಿಎಂ  ಹೆಚ್​​.ಡಿ  ಕುಮಾರಸ್ವಾಮಿ ಕಿಡಿಕಾರಿದ್ದಾರೆ, ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ, ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದೆ, ಈಗ ವಿದ್ಯುತ್ ದರ ಏರಿಕೆ ಮಾಡಿ ಚುನಾವಣೆ ಸಮಯದಲ್ಲಿ ದರ ಇಳಿಸುತ್ತಾರೆ ಎಂದರು.

ರಾಜ್ಯದಲ್ಲಿ ಉತ್ತಮ ಮಳೆಯಾಗಿ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ, ವಿದ್ಯುತ್ ಉತ್ಪಾದನೆಯೂ ಚೆನ್ನಾಗಿದೆ, ಹೆಚ್ಚುವರಿ ವಿದ್ಯುತ್ ಇದೆ ಎಂದು ಸರಕಾರವೇ ಹೇಳುತ್ತಿದೆ. ಹೀಗಿದ್ದರೂ ದರ ಏರಿಕೆಯ ಹಿಂದಿನ ಹುನ್ನಾರ ಏನು? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಬೆಲೆ ಏರಿಕೆ ಬರೆ ಎಳೆಯುವಲ್ಲಿ ಬಿಜೆಪಿ ಸರಕಾರದ್ದು ಸಾರ್ವಕಾಲಿಕ ದಾಖಲೆ, ಏಪ್ರಿಲ್ 1ರಂದು ವಿದ್ಯುತ್ ದರ ಏರಿಸಿ ಜನರಿಗೆ ಶಾಕ್ ನೀಡಿದ್ದ ಸರಕಾರ, ಈಗ ಜುಲೈ 1ರಿಂದ ಮತ್ತೆ ವಿದ್ಯುತ್ ಬರೆ ಎಳೆಯಲು ಸಜ್ಜಾಗಿದೆ ಎಂದರು.

ಮಾಸಿಕ 100 ಯೂನಿಟ್ ಬಳಸುವ ಗ್ರಾಹಕರು ಹೆಚ್ಚು ಬೆಲೆ ತೆರಬೇಕು ಅಂದರೆ ಬಡವರು ಮತ್ತು ಮಧ್ಯಮ ವರ್ಗದ ಜನರು ವಿದ್ಯುತ್ ಬಳಸದೇ ಕತ್ತಲಲ್ಲಿ ಕೊಳೆಯಬೇಕೆ? ಗತಿಶಕ್ತಿ ಯೋಜನೆ ಮೂಲಕ ದೇಶಕ್ಕೆ ಹೊಸ ಗತಿ ಕಾಣಿಸುವುದು ಎಂದರೆ ಇದೇನಾ ಎಂದು ಪ್ರಶ್ನಿಸಿದ್ದಾರೆ.

ಇಂಧನ ಇಲಾಖೆಯ ಅಸಮರ್ಪಕ ನಿರ್ವಹಣೆ ಹಾಗೂ ವಿದ್ಯುತ್ ಸೋರಿಕೆಯನ್ನು ತಡೆಯಲಾಗದ ಅದಕ್ಷತೆ ಬಗ್ಗೆ ಜನಕ್ಕೆ ಗೊತ್ತಿದೆ, ಆ ಹೊರೆಯನ್ನು ಜನರ ಮೇಲೆ ಹೇರಿ ಮೊದಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಲೂಟಿಗೆ ತುತ್ತಾಗಿರುವ ಜನರನ್ನು ಮತ್ತಷ್ಟು ಸುಲಿಗೆ ಮಾಡುವ ಪ್ರಯತ್ನ ಇದಾಗಿದೆ ಎಂದು ಕಿಡಿಕಾರಿದರು.

Discover more from Valmiki Mithra

Subscribe now to keep reading and get access to the full archive.

Continue reading