ಮುಂಬೈ: ರಾಜಕೀಯ ಹೈದ್ರಾಮಡಯೂ ನಡುವೆ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಕೊಟ್ಟಿದ್ದು ಎರಡೂವರೆ ವರ್ಷದ ಶಿವಸೇನಾ, ಎನ್ ಸಿಪಿ ಹಾಗೂ ಕಾಂಗ್ರೆಸ್ ಮೈತ್ರಿಯ ಮಹಾವಿಕಾಸ್ ಆಘಾಡಿ ಸರ್ಕಾರ ಪತನಗೊಂಡಿದೆ.
ಬುಧವಾರದಂದು ಸುದೀರ್ಘವಾದ ವಾದ-ಪ್ರತಿವಾದದ ನಡುವೆಯೂ ವಿಶ್ವಾಸಮತ ಸಾಬೀತುಪಡಿಸಲು ಸೂಚಿಸಿತು, ಇದನ್ನು ಸೋಪ್ಪಿಕೊಂಡ ಉದ್ಧವ್ ಠಾಕ್ರೆ ಜೂನ್ 30 ರಂದು ಬುಧವಾರದಂದು ರಾಜೀನಾಮೆ ಘೋಷಿಸಿದರು.
ಫೇಸ್‌ಬುಕ್‌ನಲ್ಲಿ ಲೈವ್ ಬರುವ ಮೂಲಕ ತಮ್ಮ ರಾಜೀನಾಮೆಯನ್ನು ಪ್ರಕಟಿಸಿದ ಠಾಕ್ರೆ, ವಿಧಾನ ಪರಿಷತ್ ಸ್ಥಾನಕ್ಕೂ ರಾಜೀನಾಮೆಯನ್ನು ಪ್ರಕಟಿಸಿದೆ . ಕಾಂಗ್ರೆಸ್ ನಾಯಕಿ ಸೋನಿಯಾ, ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಗೆ ಧನ್ಯವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ರಾಜೀನಾಮೆ ನಂತರ ಮಳೆಯಲ್ಲೂ ದೇಗುಲಕ್ಕೆ ಠಾಕ್ರೆ ಭೇಟಿ, ಏಕನಾಥ್ ಶಿಂಧೆ ಬಣದೊಂದಿಗೆ ಕಮಲ ಅರಳುವುದು ಪಕ್ಕಾ ಆಗಿದೆ. ಠಾಕ್ರೆ ರಾಜೀನಾಮೆ ನೀಡುವಂತೆ ದೇವೇಂದ್ರ ಫಡ್ನವೀಸ್‌ಗೆ ಸಿಹಿ ತಿನ್ನಿಸಿ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.
ಗುರುವಾರ ಸರ್ಕಾರ ರಚನೆಗೆ ಬಿಜೆಪಿ ಹಕ್ಕು ಪ್ರತಿಪಾದಿಸೋ ಸಾಧ್ಯತೆಗಳಿವೆ, ಜುಲೈ 1ಕ್ಕೆ ರೆಬೆಲ್ಸ್ ಬೆಂಬಲಿತ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವ ನಿರೀಕ್ಷೆ ಇದ್ದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿಗೆ ಹೈಕಮಾಂಡ್ ಮುಂಬೈಗೆ ಬರುವಂತೆ ಬುಲಾವ್ ನೀಡಿದೆ. ರವಿ ಮಹಾರಾಷ್ಟ್ರ, ಗೋವಾ, ತಮಿಳುನಾಡಿನಲ್ಲಿ ಪಕ್ಷದ ಉಸ್ತುವಾರಿ ಆಗಿದ್ದಾರೆ.