ಕನ್ನಡ ಭವನ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ನೆರವು : ಮಾಜಿ ಶಾಸಕ ಕೆ.ಎನ್. ರಾಜಣ್ಣ

ಮಧುಗಿರಿ : ಪಟ್ಟಣದ ಕನ್ನಡ ಭವನದ ಪೂರ್ಣಗೊಳಿಸಲು ಕಾಮಗಾರಿ ಪೂರ್ಣಗೊಳಿಸಲು ವಿವಿಧ ಮೂಲಗಳಿಂದ ಹಣಕಾಸಿನ ನೆರವು ಮೂಲಗಳಿಂದ ಹಣ ಕಾಸಿನ ನೀಡುವುದಾಗಿ ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.

ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಸಹನಾ ನಾಗೇಶ್ ಹಾಗೂ ಪಧಾದಿಕಾರಿಗಳು ನನ್ನನ್ನು ಭೇಟಿಯಾಗಿ ಸುಮಾರು ವರ್ಷಗಳಿಂದ ಆಮೆ ಗತಿಯಲ್ಲಿ ಸಾಗುತ್ತಿರುವ ಕನ್ನಡ ಭವನ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಲು ಆರ್ಥಿಕ ನೆರವು ಕೊಡಿಸುವಂತೆ ಮನವಿ ಮಾಡಿದ್ದಾರೆ ಎಂದು ತಿಳಿಸಿದರು.

ಮನವಿಗೆ ಸ್ಪಂದಿಸಿ ಭವನದ ಆಸನ ವ್ಯವಸ್ಥೆ ಕಾಮಗಾರಿಗಳನ್ನು ಇನ್ನಿತರ ಪೂರ್ಣಗೊಳಿಸಲು ಸಹಕಾರ ನೀಡುವುದಾಗಿ ತಿಳಿಸಿದ ಅವರು, ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಹಾಗೂ ನವೆಂಬರ್ ಒಂದರೊಳಗೆ ಕಾಮಗಾರಿ ಪೂರ್ಣಗೊಂಡು ಎಲ್ಲರ ಸಹಕಾರದೊಂದಿಗೆ ಕಾರ್ಯಕ್ರಮಗಳು ಅಲ್ಲಿಯೇ ನಡೆಯುವಂತಾಗಬೇಕು ಎಂದರು.

ತಾಲ್ಲೂಕಿನ ಸಾಹಿತ್ಯ , ಸಾಹಿತಿಗಳು ಹಾಗೂ ಗಣ್ಯರ ಕುರಿತ ಲೇಖನಗಳನ್ನು ಮುಂದಿನ ಪೀಳಿಗೆಗೆ ತಿಳಿಸಿಕೊಡುವ ಉದ್ದೇಶದಿಂದ ಸ್ಮರಣ ಸಂಚಿಕೆಯನ್ನು ಹೊರತರಲು ಮಲನ ಮೂರ್ತಿ, ನಾ.ಮಹಲಿಂಗೇಶ್ ಒಳಗೊಂಡ ಸಮಿತಿಯನ್ನು ರಚಿಸಲಾಗುವುದು ಎಂದು ತಿಳಿಸಿದರು.

ಜುಲೈ 6 ರಂದು ಮಧುಗಿರಿ ಪಟ್ಟಣಕ್ಕೆ ಆಗಮಿಸಲಿರುವ ಡಾ.ಡಿ.ವೀರೇಂದ್ರಹೆಗ್ಗಡೆ ಅದ್ದೂರಿಯಾಗಿ ಸ್ವಾಗತಿಸಿ , ಅಭಿನಂದಿಸಲಾಗುವುದು, ಆ .6 ರಂದು ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75 ನೆ ವರ್ಷದ ಹುಟ್ಟು ಹಬ್ಬದ ಕಾರ್ಯಕ್ರಮವನ್ನು ದಾವಣಗೆರೆಯಲ್ಲಿ ಆಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು.

ಈ ಬಗ್ಗೆ ಜುಲೈ 3 ರಂದು ಆರ್.ವಿ.ದೇಶಪಾಂಡೆರವರ ಬೆಂಗಳೂರಿನ ನಿವಾಸದಲ್ಲಿ ಕಾಂಗ್ರೆಸ್‌ನ ಹಿರಿಯ ಮುಖಂಡರ ಜೊತೆ ಪೂರ್ವಭಾವಿ ಸಭೆಯನ್ನು ನಡೆಸಲಾಗುತ್ತಿದ್ದು ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಆಹ್ವಾನಿಸಲಾಗುವುದು ಎಂದರು.

ದಾವಣಗೆರೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರು 5 ಲಕ್ಷ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದ್ದು ಕಾರ್ಯಕ್ರಮವನ್ನು ಅದ್ದೂರಿಯಾಗಿ ನೆರವೇರಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಲ್ಲಿಕಾರ್ಜುನಯ್ಯ , ಪುರಸಭೆ ಮಾಜಿ ಅಧ್ಯಕ್ಷ ಎಂ.ಕೆ.ನಂಜುಂಡಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

Discover more from Valmiki Mithra

Subscribe now to keep reading and get access to the full archive.

Continue reading