ಮೈಸೂರು : ಆಷಾಢ ಶುಕ್ರವಾರದ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಇಂದು ಖಾಸಗಿ ವಾಹನಗಳ ನಿರ್ಬಂಧ ವಿಧಿಸಿದ್ದು ಅನುಮತಿ ಇರುವ ವಾಹನಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದ್ದು ಬೆಟ್ಟದ ತಪ್ಪಲಿನಲ್ಲೇ ಪೊಲೀಸರ ಬಿಗಿಭದ್ರತೆ ಕೈಗೊಂಡಿದ್ದಾರೆ.
ತಾವರೆಕಟ್ಟೆ ಸರ್ಕಲ್ ನಲ್ಲೇ ಬ್ಯಾರಿಕೇಡ್ ನಿರ್ಮಾಣ ಮಾಡಿ ಕೆ.ಎಸ್.ಆರ್.ಟಿ.ಸಿ ಬಸ್ ಗಳಲ್ಲಿ ಮಾತ್ರ ಭಕ್ತರಿಗೆ ಬೆಟ್ಟಕ್ಕೆ ತೆರಳಲು ಅವಕಾಶ ಕಲ್ಪಿಸಲಾಗಿದ್ದು ಲಲಿತಮಹಲ್ ಹೆಲಿಪ್ಯಾಡ್ ಬಳಿ ತಾತ್ಕಾಲಿಕವಾಗಿ ಕೆ. ಎಸ್.ಅರ್.ಟಿ.ಸಿ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗಿದೆ.
ಆಷಾಢ ಶುಕ್ರವಾರದ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಅಪಾರ ಭಕ್ತ ಸಾಗರ ಹರಿದುಬರುತ್ತಿದ್ದಾರೆ, ಕೊರೊನಾದಿಂದಾಗಿ ಎರಡು ವರ್ಷಗಳಿಂದ ಭಕ್ತರಿಗೆ ಪ್ರವೇಶ ನಿರಾಕರಣೆ ಮಾಡಲಾಗಿತ್ತು
ಈ ವರ್ಷ ಭಕ್ತರಿಗೆ ಬೆಟ್ಟಕ್ಕೆ ತೆರಳಲು ಅನುಮತಿ ನೀಡಲಾಗಿದೆ.
ಶುಕ್ರವಾರ ಮುಂಜಾನೆಯಿಂದಲೇ ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಸಹಸ್ರಾರು ಭಕ್ತರು ಆಗಮಿಸುತ್ತಿದ್ದು ದೇವಾಲಯದ ಆವರಣದಲ್ಲಿ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗಿದೆ, ದೇವಾಲಯದ ಒಳಾವರಣ ಸಿಂಗಾರಗೊಂಡಿದ್ದು ಭಕ್ತಿಭಾವದಿಂದ ಭಕ್ತರು ದರ್ಶನ ಪಡೆಯುತ್ತಿದ್ದಾರೆ.