ಬೆಂಗಳೂರು:ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪದೇಪದೆ ಹೊಸದಿಲ್ಲಿಗೆ ಭೇಟಿ ನೀಡುತ್ತಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ.
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ 1 ವರ್ಷ ಪೂರ್ಣಗೊಳ್ಳುತ್ತಿದ್ದಂತೆ ಬಿಜೆಪಿ ಪಾಳಯದಲ್ಲಿ ನಡೆಯುತ್ತಿರುವ ಆಂತರಿಕ ಬೆಳವಣಿಗೆಗಳು, ಮುಖಂಡರ ಪಿಸು ಪಿಸು ಮಾತುಗಳು ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆಯನ್ನು ನಿಧಾನವಾಗಿ ಮುನ್ನಲೆಗೆ ತರುತ್ತಿದೆ.
ಇದೀಗ ಮುಂದಿನ ಸಿಎಂ ವೀರಶೈವ ಮತ್ತು ದಲಿತರ ಪರವಾಗಿ ಸಾರಿಗೆ ಸಚಿವರಾಗಿರುವಂತಹ ಬಿ. ಶ್ರೀರಾಮುಲು ಅವರ ಹೆಸರು ಕೇಳಿ ಬರುತ್ತಿದೆ ಅಷ್ಟೇ ಅಲ್ಲದೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕೂಡ ಸಿಎಂ ರೇಸ್ ನಲ್ಲಿ ಮುಂದಿದ್ದಾರೆ ಮತ್ತು ಒಕ್ಕಲಿಗರ ಪರವಾಗಿ ಸಿಟಿ ರವಿ ಅವರ ಹೆಸರು ಕೂಡ ಕೇಳಿ ಬರುತ್ತಿದೆ.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿ ಎಲ್ ಸಂತೋಷ್ ಮತ್ತು ಪ್ರಹ್ಲಾದ್ ಜೋಶಿಯವರಿಗೆ ಆಪ್ತರಾಗಿದ್ದು ಇವರ ಜೊತೆ ಶೆಟ್ಟರ್ ಅವರು ಒಳ್ಳೆಯ ಒಡನಾಟವನ್ನು ಕೂಡ ಹೊಂದಿದ್ದಾರೆ ಅಷ್ಟೇ ಅಲ್ಲದೆ ದೆಹಲಿಗೂ ಕೂಡ ಹೋಗಿ ನಾಯಕರನ್ನು ಭೇಟಿ ಮಾಡಿ ಬರುತ್ತಿದ್ದಾರೆ ಹೀಗಾಗಿ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಅಂತೆ ಕಂತೆಗಳಿಗೆ ಬ್ರೇಕ್ ಹಾಕುವಲ್ಲಿ ಬಿಜೆಪಿ ಹೈಕಮಾಂಡ್ ಏನು ನಿರ್ಧಾರ ಕೈಗೊಳ್ಳಲಿದೆ ಎಂಬವುದನ್ನು ಕಾದುನೋಡಬೇಕಿದೆ. ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮೂರನೇ ಮುಖ್ಯಮಂತ್ರಿ ಅಧಿಕಾರಕ್ಕೆ ಬರುವುದು ಖಚಿತ ಎನ್ನಲಾಗುತ್ತೀದೆ. ಆದರೆ ಇವರ ಈ ಭವಿಷ್ಯ ಎಷ್ಟರ ಮಟ್ಟಿಗೆ ಸತ್ಯ ಎಂಬುದಕ್ಕೆ ಕಾಲವೇ ಉತ್ತರ ನೀಡಬೇಕು.