ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ದೃಢಪಟ್ಟಿದೆ. ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಕೊರೊನಾ ಪಾಸಿಟಿವ್ ಆಗಿರುವುದನ್ನು ಖಚಿತಪಡಿಸಿದ್ದಾರೆ.
ಕೊವಿಡ್ ಖಚಿತಪಟ್ಟ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿ ಪ್ರಯಾಣವನ್ನು ರದ್ದುಪಡಿಸಿದ್ದಾರೆ. ತಮಗೆ ಕೊವಿಡ್ 19 ಖಚಿತಪಟ್ಟಿದೆ ಎಂದು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಟ್ವೀಟ್ ಮೂಲಕ ದೃಢಪಡಿಸಿದ್ದಾರೆ.
“ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.