ದರ್ಶನ್ ಹೊಸ ಚಿತ್ರಕ್ಕೆ ನಟಿ ಮಾಲಾಶ್ರೀ ಪುತ್ರಿ ರಾಧಾನ ರಾಮ್ ನಾಯಕಿ

ದರ್ಶನ್ ಅವರ ಹೊಸ ಚಿತ್ರ ಡಿ-56 ಗೆ ಹಿರಿಯ ನಟಿ ಮಾಲಾಶ್ರೀ ಮತ್ತು ನಿರ್ಮಾಪಕ ರಾಮು ದಂಪತಿಯ ಪುತ್ರಿ ರಾಧನಾ ರಾಮ್ ಆಯ್ಕೆಯಾಗಿದ್ದಾರೆ.

ತರುಣ್ ಸುಧೀರ್ ನಿರ್ದೇಶನದ ಚಿತ್ರಕ್ಕೆ ಹಿರಿಯ ನಿರ್ಮಾಪಕ‌ ರಾಕ್ ಲೈನ್ ವೆಂಕಟೇಶ್ ಬಂಡವಾಳ ಹಾಕುತ್ತಿದ್ದಾರೆ.
ಮೊದಲ ಚಿತ್ರದಲ್ಲೇ ದರ್ಶನ್ ರಂತಹ ಸ್ಟಾರ್ ನಟರ ಜೊತೆಗೆ ನಟಿಸುತ್ತಿರುವ ಬಗ್ಗೆ ರಾಧನಾ ಖುಷಿ ವ್ಯಕ್ತಪಡಿಸಿದ್ದಾರೆ.
ಈ ಚಿತ್ರದಲ್ಲಿ ನಟಿಸುವುದಕ್ಕೆ ಬಹಳ ಅನಿರೀಕ್ಷಿತವಾಗಿ ಅವಕಾಶ ಸಿಕ್ಕಿತು. ಈ ಚಿತ್ರದಲ್ಲಿ ನಟಿಸುತ್ತಿರುವ ವಿಷಯವನ್ನು ಇನ್ನೂ ಅರಗಿಸಿಕೊಳ್ಳುವುದಕ್ಕೆ ನನ್ನಿಂದ ಸಾಧ್ಯವಾಗುತ್ತಿಲ್ಲ. ನನಗೆ ನಟಿಸುವ ಆಸೆ ಚಿಕ್ಕಂದಿನಿಂದಲೂ ಇತ್ತು. ಎರಡು ವರ್ಷಗಳ ಕಾಲ ಸಾಕಷ್ಟು ತರಬೇತಿ ಪಡೆದು ಕ್ಯಾಮೆರಾ ಮುಂದೆ ನಿಲ್ಲುತ್ತಿದ್ದೇನೆ. ಚಿತ್ರಕ್ಕೆ ಸಂಬಂಧಿಸಿದ ವರ್ಕ್ ಶಾಪ್ ನಲ್ಲೂ ಭಾಗವಹಿಸುತ್ತಿದ್ದೇನೆ’ಎಂದರು.

ರಾಧಾನಾ ಚಿತ್ರರಂಗದ ಕುರಿತು ತಾಯಿ ಮಾಲಾಶ್ರೀ ಮಾತನಾಡಿ, ‘ನನಗೆ ಬದುಕು ಕೊಟ್ಟ ಚಿತ್ರರಂಗಕ್ಕೆ ಈಗ ನನ್ನ ಮಗಳು ಸಹ ಕಾಲಿಡುತ್ತಿದ್ದಾಳೆ. ನನಗೆ ಎಷ್ಟು ಪ್ರೀತಿ ತೋರಿಸಿದ್ದೀರೋ, ನನ್ನ ಮಗಳಿಗೆ ಅದಕ್ಕಿಂತ ಹೆಚ್ಚು ಪ್ರೀತಿ ತೋರಿಸಿ ಎಂದು ಕೇಳಿಕೊಳ್ಳುತ್ತೇನೆ.

ರಾಕ್ ಲೈನ್ ವೆಂಕಟೇಶ್ ಅವರು ನನ್ನ ಸಿನಿಮಾ ಮೂಲಕ ಚಿತ್ರ ನಿರ್ಮಾಣ ಶುರು ಮಾಡಿದರು. ಈಗ ನನ್ನ ಮಗಳು ಅವರ ನಿರ್ಮಾಣದ ಚಿತ್ರದ ಮೂಲಕ ಚಿತ್ರರಂಗಕ್ಕೆ ಚಿತ್ರಜೀವನ ಪ್ರಾರಂಭಿಸುತ್ತಿದ್ದಾಳೆ. ಒಂದೊಳ್ಳೆಯ ತಂಡದಿಂದ ಅವಳು ಚಿತ್ರರಂಗಕ್ಕೆ ಬರುತ್ತಿದ್ದಾಳೆ ಎಂಬ ಖುಷಿ ಇದೆ. ಅವಳು 14ನೇ ವಯಸ್ಸಿನಲ್ಲಿದ್ದಾಗಲೇ ಚಿತ್ರರಂಗಕ್ಕೆ ಬರಬೇಕು, ಅಭಿನಯಿಸಬೇಕು ಎಂದು ಆಸೆ ಪಟ್ಟಿದ್ದಳು. ಮುಂಬೈನಲ್ಲಿ ನಟನೆ, ಡ್ಯಾನ್ಸ್ ತರಬೇತಿ ಪಡೆದಿದ್ದಾಳೆ. ನಾಳೆ ಸ್ಕ್ರೀನ್ ಮೇಲೆ ಕಾಣಿಸಿಕೊಂಡಾಗ, ಪ್ರೇಕ್ಷಕರು ನನ್ನ ಮತ್ತು ಅವಳ ನಡುವೆ ಹೋಲಿಕೆ ಮಾಡುವುದು ಸಹಜ. ಆದರೆ, ಅವಳು ತನ್ನ ಹೆಸರಿನಿಂದ ಗುರುತಿಸಿಕೊಳ್ಳಬೇಕೇ ಹೊರತು, ನನ್ನ ಹೆಸರಿನಿಂದ ಗುರುತಿಸಿಕೊಳ್ಳಬಾರದು ಎಂಬುದು ನನ್ನ ಆಸೆ’ ಎಂದರು ಮಾಲಾಶ್ರೀ.

ಡಿ56 ಚಿತ್ರಕ್ಕೆ ಸುಧಾಕರ್ ರಾಜ್ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಅವರ ಸಂಕಲನ, ಮಾಸ್ತಿ ಅವರ ಸಂಭಾಷಣೆ ಇದೆ. ಚಿತ್ರದ ಬಹುತೇಕ ಚಿತ್ರೀಕರಣ ಸೆಟ್ ನಲ್ಲೇ ನಡೆಯಲಿದ್ದು, ಬೆಂಗಳೂರಿನಲ್ಲೇ ಚಿತ್ರೀಕರಣ ಮುಂದುವರೆಯಲಿದೆ.

Discover more from Valmiki Mithra

Subscribe now to keep reading and get access to the full archive.

Continue reading