ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಬಿಜೆಪಿಯಲ್ಲಿ ಬದಲಾವಣೆ ಪರ್ವ ಆರಂಭವಾಗಿದೆ.
ರಾಜ್ಯದಲ್ಲಿ ಬಿಜೆಪಿಗಾಗಿ ದುಡಿಯುತ್ತಿರುವವರಿಗೆ ರಕ್ಷಣೆ ಇಲ್ಲಾ ಎಂದು ಈಗಾಗಲೇ ನೂರಾರು ಕಾರ್ಯಕರ್ತರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಕಾರ್ಯಕರ್ತರ ಮನವೊಲಿಸುವಲ್ಲಿ ಬಿಜೆಪಿ ರಾಜ್ಯ ಮುಖಂಡರು ವಿಫಲರಾಗುತ್ತಿದ್ದು, ಕರ್ನಾಟಕದಲ್ಲಿ ಹೊಸ ರಾಜ್ಯಾಧ್ಯಕ್ಷರನ್ನು ನೇಮಿಸಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. ನಳೀನ್ ಕುಮಾರ್ ಕಟೀಲ್ ಆಗಸ್ಟ್ಗೆ ರಾಜ್ಯಾಧ್ಯಕ್ಷರಾಗಿ ಮೂರು ವರ್ಷದ ಅಧಿಕಾರಾವಧಿ ಪೂರೈಸಲಿದ್ದು, ಕಟೀಲ್ ಸ್ಥಾನವನ್ನು ರಾಜ್ಯ ಸುತ್ತಿ ಪಕ್ಷ ಸಂಘಟನೆಗೆ ತೊಡಗುವ ನಾಯಕನಿಗೆ ನೀಡಲು ವರಿಷ್ಠರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಸದ್ಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇಂಧನ ಸಚಿವ ಸುನೀಲ್ ಕುಮಾರ್ ಹೆಸರು ಮುಂಚೂಣಿಯಲ್ಲಿದೆ. ಇನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೆಸರು ಕೂಡ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಳು ಬರುತ್ತಿದೆ.