ಬೆಂಗಳೂರು: ಕಾಂಗ್ರೆಸ್ನಲ್ಲಿ ಎರಡು ಬಣಗಳಿವೆ ಎನ್ನುವ ಆರೋಪದ ನಡುವೆಯೂ ಸಿದ್ದರಾಮೋತ್ಸವ ಕಾರ್ಯಕ್ರಮದ ಯಶಸ್ಸಿನ ಬೆನ್ನಲ್ಲೇ ಅಮೃತ ಮಹೋತ್ಸವ ಹೆಸರಿನಲ್ಲಿ ಡಿ.ಕೆ ಶಿವಕುಮಾರ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಮೂಲಕ ತಮ್ಮ ಶಕ್ತಿ ಪ್ರದರ್ಶನ ನಡೆಸಲು ಮುಂದಾಗಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವವಾಗಿದೆ.
ರಾಜ್ಯಾದ್ಯಂತ ಅತಿವೃಷ್ಠಿಯಿಂದ ತೀವ್ರ ಹಾನಿಯಾಗಿದ್ದು, ಸಿಎಂ ಬೊಮ್ಮಾಯಿ ಸಂಪುಟದ ಸಚಿವರು ಪ್ರವಾಹ ಪೀಡಿತ ಸ್ಥಳಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸುತ್ತಿಲ್ಲ. ಇತ್ತ ಪ್ರತಿಪಕ್ಷವಾಗಿ ರಾಜ್ಯ ಸರ್ಕಾರವನ್ನು ಎಚ್ಚರಿಸಬೇಕಾದ ಕಾಂಗ್ರೆಸ್ ನಾಯಕರೂ ಕೂಡ ಜನರ ಬಳಿ ಹೋಗದೇ ತಮ್ಮ ಶಕ್ತಿ ಪ್ರದರ್ಶನಕ್ಕಾಗಿ ಪಾದಯಾತ್ರೆ, ಉತ್ಸವಗಳಲ್ಲೇ ಕಾಲಹರಣ ಮಾಡುತ್ತಿದ್ದಾರೆ.
ಜನಪ್ರತಿನಿಧಿಗಳಿಗೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಸಮಯವಿಲ್ಲ. ಬದಲಿಗೆ ಕಾರ್ಯಕ್ರಮಗಳನ್ನು ನಡೆಸಲು ವಾರಗಟ್ಟಲೆ ಸರಣಿ ಸಭೆಗಳು ನಡೆಸುವಲ್ಲಿ ಬ್ಯುಸಿಯಾಗಿದ್ದಾರೆ.
ಸರ್ಕಾರವನ್ನು ಎಚ್ಚರಿಸಬೇಕಾದ ಕೆಪಿಸಿಸಿ ಅಧ್ಯಕ್ಷರು ಕೂಡ ವೈಯುಕ್ತಿಕ ಪ್ರತಿಷ್ಠೆಗಾಗಿ ಜನಸಾಮಾನ್ಯರರನ್ನು ಮರೆತು ಬಿಟ್ರಾ..? ಜನ ಸಂಕಷ್ಟದಲ್ಲಿರು ಇಂತಹ ಈ ಸಮಯದಲ್ಲಿ ಪಾದಯಾತ್ರೆಯಂತಹ ಕಾರ್ಯಕ್ರಮಗಳ ಅವಶ್ಯಕತೆ ಇದೆಯೇ ಎನ್ನುವ ಪ್ರಶ್ನೆಗಳು ಜನರನ್ನು ಕಾಡುತ್ತಿದೆ.