ಬೆಂಗಳೂರು: ಕಾಂಗ್ರೆಸ್ ಸಿಎಂ ಕನಸು ನನಸಾಗದು. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಆ.21 ರಿಂದ ಎಲ್ಲೆಡೆ ಪ್ರವಾಸ ಮಾಡುತ್ತೇನೆ. ರಾಯರ ಕ್ಷೇತ್ರದಲ್ಲಿ ಈ ಮಾತು ಹೇಳಿರೋದರಿಂದ ಗೆಲವು ಶತಸಿದ್ಧ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಗೆಲ್ಲುವ ಅಭ್ಯರ್ಥಿ ಹುಡುಕಿ ಕೆಲಸ ಮಾಡಲು ಸೂಚನೆ ನೀಡಿದ್ದೇವೆ. ಪ್ರವಾಸದ ಮೂಲಕ ಪಕ್ಷ ಸಂಘಟನೆ ಮಾಡುವೆ. ಸಿಎಂ ಸ್ಥಾನ ಬಿಟ್ಟಿದ್ದರೂ ಜನರ ಒಲವು ನನ್ನ ಮೇಲಿದೆ. ಕರ್ನಾಟಕದ ಜನರ ವಿಶ್ವಾಸ ಬಿಜೆಪಿ ಪರವಿದೆ. ಅಧಿಕಾರಕ್ಕೆ ತರೋದೇ ನಮ್ಮ ಗುರಿ. ಕಾರ್ಯಕರ್ತರು ಗೊಂದಲಕ್ಕೆ ಸಿಲುಕೋದು ಬೇಡ ಎಂದು ಸಲಹೆ ನೀಡಿದರು.
ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ನಮ್ಮ ಪಕ್ಷಕ್ಕೆ ಶಕ್ತಿ. ಅಮಿತ್ ಶಾ ಜತೆ ರಾಜ್ಯ ರಾಜಕೀಯ ವಿದ್ಯಮಾನದ ಕುರಿತು ಚರ್ಚೆ ಆಗಿದೆ. ನಾವು ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಕೇಂದ್ರ ನಾಯಕರಿಂದ ಯಾವುದೇ ಅಡ್ಡಿ ಆತಂಕವಿಲ್ಲ. ಸಾಮೂಹಿಕ ನೇತೃತ್ವದಲ್ಲೇ ವಿಧಾನಸಭಾ ಚುನಾವಣೆ ಎದುರಿಸ್ತೇವೆ ಎಂದರು.
ನಾನು ರಾಜೀನಾಮೆ ಕೊಟ್ಟ ನಂತರವೇ ಸಿಎಂ ಆಯ್ಕೆ ಆಗಿದೆ. ನನಗೆ ಪಕ್ಷ ಎಲ್ಲಾ ರೀತಿಯ ಗೌರವ ನೀಡಿದೆ. ಪಕ್ಷದಿಂದ ನನಗೆ ಅನ್ಯಾಯ ಆಗಿಲ್ಲ. ಪಕ್ಷದ ಆ ಋಣ ತೀರಿಸುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರುವ ಪ್ರಯತ್ನ ಮಾಡುವೆ ಎಂದು ಹೇಳಿದರು.