ಕೋಲ್ಕತ್ತಾ: ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಮಹಿಳಾ ಕೃಷಿ ಕಾರ್ಮಿಕರು ಸೇರಿದಂತೆ 9 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
ಬೀರ್ಭೂಮ್ ಜಿಲ್ಲೆಯಲ್ಲಿರುವ ಮಲ್ಲಾರಪುರ ಸಮೀಪದ ರಾಮ್ಪುರ್ ಹಟ್ನ ರಾಷ್ಟ್ರೀಯ ಹೆದ್ದಾರಿ 60ರಲ್ಲಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ 9 ಮಂದಿ ಮೃತಪಟ್ಟಿರುವುದಕ್ಕೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ದುರಂತದಲ್ಲಿ ಜೀವ ಹಾನಿಯಾಗಿರುವುದು ಅತೀವ ವೇದನೆ ಉಂಟು ಮಾಡಿದೆ.
ಮೃತಪಟ್ಟವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿರುವ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಯಿಂದ ಮೃತ ಕುಟುಂಬದವರಿಗೆ ತಲಾ ಎರಡು ಲಕ್ಷ ಪರಿಹಾರ ಹಾಗೂ ಗಾಯಾಳುಗಳಿಗೆ 50 ಸಾವಿರ ನೀಡುವುದಾಗಿ ಟ್ವೀಟ್ ಮಾಡಲಾಗಿದೆ.