ದುನಿಯಾ ವಿಜಯ್ ಮಗಳು ಮೋನಿಕಾ ಇತ್ತೀಚೆಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.ಮಗಳ ಬರ್ತಡೇಯನ್ನು ಅದ್ದೂರಿಯಾಗಿ ಆಚರಿಸಿದ್ದ ದುನಿಯಾ ವಿಜಯ್ ಮಗಳಿಗೆ ದುಬಾರಿ ಉಡುಗೊರೆಯನ್ನೇ ನೀಡಿದ್ದಾರೆ.
ಮೋನಿಕಾ ಹುಟ್ಟುಹಬ್ಬದ ಪ್ರಯುಕ್ತ ದುನಿಯಾ ವಿಜಯ್ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ತಂದೆ ಹಾಗೂ ಕಾರಿನ ಜೊತೆ ತೆಗೆಸಿಕೊಂಡಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಮೋನಿಕಾ ಲವ್ ಯು ಅಪ್ಪ ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಟನಾಗಿ ಚಂದನವನದಲ್ಲಿ ಗುರುತಿಸಿಕೊಂಡಿದ್ದ ದುನಿಯಾ ವಿಜಯ್ ಸಲಗ ಸಿನಿಮಾದ ಮೂಲಕ ನಿರ್ದೇಶಕನಾಗಿಯೂ ಕೂಡ ಸಕ್ಸಸ್ ಕಂಡವರು. ಇದೀಗ ಭೀಮ ಚಿತ್ರದ ಜತೆಗೆ ಟಾಲಿವುಡ್ ಗೂ ಎಂಟ್ರಿಕೊಟ್ಟಿದ್ದಾರೆ. ನಂದಮೂರಿ ಬಾಲಕೃಷ್ಣ ನಟನೆಯ ಮುಂದಿನ ಸಿನಿಮಾದಲ್ಲಿ ವಿಜಯ್ ಅಬ್ಬರಿಸಲಿದ್ದಾರೆ.