ಬೆಂಗಳೂರು: ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಯಾವುದೇ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳು, ಸಭೆ ಸಮಾರಂಭಗಳನ್ನು ನಡೆಸುವಂತಿಲ್ಲ. ಹೀಗಾಗಿ ಗುರುವಾರದ ಜನೋತ್ಸವ ಕಾರ್ಯಕ್ರಮವನ್ನು ಭಾನುವಾರಕ್ಕೆ ಮುಂದೂಡಲಾಗಿದೆ.
ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಮಾಹಿತಿ ನೀಡಿದ್ದು, ತುರ್ತು ನಿರ್ವಹಣೆ ಬಿಟ್ಟರೆ ರಾಜ್ಯದಲ್ಲಿ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ಸಭೆಸಮಾರಂಭ ಆಯೋಜಿಸುವಂತಿಲ್ಲ. ಅಲ್ಲದೆ ಉಮೇಶ್ ಕತ್ತಿ ಅವರು 8 ಬಾರಿ ಶಾಕಸರಾಗಿ, 4 ಬಾರಿ ಸಚಿವರಾಗಿ ತಮ್ಮದೇ ಆದ ಸೇವೆ ಸಲ್ಲಿಸಿದ್ದಾರೆ. ಅವರ ಹಿರಿತನವನ್ನು ಗೌರವಿಸಿ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಹೇಳಿದರು.
ಜನೋತ್ಸವ – ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಯ ಅನಾವರಣ ಸಮಾವೇಶವು ಸೆ.8ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಉಪಸ್ಥಿತಿ ಮತ್ತು ರಾಜ್ಯ ನಾಯಕರ ಸಮ್ಮುಖದಲ್ಲಿ ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ. ಈ ವೇಳೆ ಅತ್ಯಕ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾವೇಶವನ್ನು ಯಶಸ್ವಿಗೊಳಿಸೋಣ ಎಂದು ಬಿಜೆಪಿ ಟ್ವೀಟ್ ಮಾಡಿತ್ತು.