ಬೆಂಗಳೂರು: ‘ಖಾಸಗಿ ಸಂಸ್ಥೆಯೊಂದು ಮತದಾರರ ಅಂಕಿಅಂಶಗಳನ್ನು ಅಕ್ರಮವಾಗಿ ಸಂಗ್ರಹಿಸುತ್ತಿದ್ದು, ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಕಾರಣ. ಅವರ ಮೇಲೆ ಎಫ್ಐಆರ್ ದಾಖಲಿಸಿ, ಬಂಧಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಗ್ರಹಿಸಿದರು.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆ ಗುರುವಾರ ಬೆಳಿಗ್ಗೆ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚಿಲುಮೆ’ ಎಂಬ ಸರ್ಕಾರೇತರ ಸಂಸ್ಥೆ ತನ್ನ ಏಜೆಂಟರನ್ನು ಸರ್ಕಾರಿ ಅಧಿಕಾರಿಗಳಂತೆ ಬಿಂಬಿಸಿ ಸಾವಿರಾರು ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಿದೆ. ಈ ಅಕ್ರಮದ ಹೊಣೆಯನ್ನು ಬಸವರಾಜ ಬೊಮ್ಮಾಯಿ ಹೊರಬೇಕು. ಅಲ್ಲದೆ, ಅವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.
‘ಮತದಾರರ ಡಾಟಾ ಸಂಗ್ರಹಿಸಲು ಖಾಸಗಿ ಸಂಸ್ಥೆಯವರಿಗೆ ಅವಕಾಶ ಸಿಕ್ಕಿದೆ ಹೇಗೆ? ಅಕ್ರಮವಾಗಿ ಸಂಗ್ರಹಿಸುತ್ತಿರುವುದು ಏಕ? ಬೂತ್ ಮಟ್ಟದ ಅಧಿಕಾರಿಗಳು ಏನು ಮಾಡುತ್ತಿದ್ದಾರೆ. ಅವರ ಸಹಕಾರವೇನಾದರೂ ಇದೆಯೇ? ಎಂದು ಸುರ್ಜೇವಾಲ ಪ್ರಶ್ನಿಸಿದರು,