ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸೇರಿದಂತೆ ಮತ್ತಿತರ ಸರ್ಕಾರ ಮತ್ತು ನನ್ನ ಮೇಲೆ ಗುರುತರವಾದ ಆರೋಪಗಳನ್ನು ಮಾಡಿದ್ದಾರೆ. ಈ ಕುರಿತು ನಾನು ಸಮಗ್ರ ತನಿಖೆ ನಡೆಸಲು ಸಂಬಂಧ ಪಟ್ಟ ಅಕಾರಿಗಳಿಗೆ ಸೂಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕಾಂಗ್ರೆಸ್ ಮಾಡಿರುವ ಆರೋಪಗಳೆಲ್ಲವೂ ಸತ್ಯಕ್ಕೆ ದೂರವಾದದ್ದು, ಸರ್ಕಾರ ಮತ್ತು ನಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಇದರಲ್ಲಿ ನಾನಾಗಲಿ, ನಮ್ಮ ಸಂಪುಟದ ಸಚಿವರು ಸೇರಿದಂತೆ ಯಾರೂ ಕೂಡ ಭಾಗಿಯಾಗಿಲ್ಲ. ಎಲ್ಲವೂ ಕಪೋಲ ಕಲ್ಪಿತ ಎಂದು ಸ್ಪಷ್ಟಪಡಿಸಿದರು.
ಇದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಪ್ರತಿಯೊಬ್ಬರೂ ಕೂಡ ಮತದಾರರ ಮಾಹಿತಿಯನ್ನು ಕಲೆ ಹಾಕುತ್ತಾರೆ. ಆದರೆ ಅವರ ವೈಯಕ್ತಿಕ ವಿಷಯಗಳನ್ನು ತೆಗೆದುಕೊಳ್ಳುವುದಿಲ್ಲ. ಕಾಂಗ್ರೆಸ್ ನವರು ನಾವೇನೊ ಸಾಸಿಬಿಟ್ಟಿದ್ದೇವೆಂಬ ಭ್ರಮೆಯಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು.