ಬೆಂಗಳೂರು: ಎರಡು ದಿನಗಳ ನವದೆಹಲಿ ಪ್ರವಾಸ ಮುಗಿಸಿಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿಂತಿರುಗಿದ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಸಚಿವರಾದ ಡಾ.ಕೆ.ಸುಧಾಕರ್, ಆನಂದ್ ಸಿಂಗ್ ಹಾಗೂ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಿ.ಪಿ.ಯೋಗೇಶ್ವರ್, ಇತ್ತೀಚೆಗಷ್ಟೇ ಪಕ್ಷಕ್ಕೆ ಸೇರ್ಪಡೆಯಾಗಿರುವ ಮಾಜಿ ಸಂಸದ ಮುದ್ದಹನುಮೇಗೌಡ ಮತ್ತಿತರರು ಭೇಟಿಯಾಗಿದ್ದರು.
ಎರಡು ದಿನಗಳ ಕಾಲ ದೆಹಲಿಯಲ್ಲಿ ಇದ್ದ ಸಿಎಂ ಬೊಮ್ಮಾಯಿ ಅವರು, ಕೇಂದ್ರದ ವಿವಿಧ ಇಲಾಖೆಯ ಸಚಿವರನ್ನು ಭೇಟಿಯಾಗಿ ರಾಜ್ಯದ ಯೋಜನೆಗಳ ಅನುಷ್ಠಾನ ಕುರಿತು ಮಾತುಕತೆ ನಡೆಸಿದ್ದರು.