ಬೆಳಗಾವಿ: ಎರಡು ರಾಜ್ಯಗಳ ಮಧ್ಯೆ ಇರುವ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರುವುದು ಸೂಕ್ತವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು
ಅವರು ಇಲ್ಲಿಗೆ ಬರಬಾರದು ಎಂಬ ಸಂದೇಶವನ್ನು ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳು ಅಲ್ಲಿನ ಮುಖ್ಯ ಕಾರ್ಯದರ್ಶಿಗಳಿಗೆ ಫ್ಯಾಕ್ಸ್ ಮೂಲಕ ಸಂದೇಶ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಡಿಸೆಂಬರ್ 06 ರಂದು ಬೆಳಗಾವಿಗೆ ಮಹಾರಾಷ್ಟ್ರದ ಸಚಿವರು ಆಗಮಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಈಗಾಗಲೇ ಹಿಂದೆ ಹಲವಾರು ಬಾರಿ ಈ ಪ್ರಯತ್ನ ಗಳಾದಾಗ ಕರ್ನಾಟಕ ಸರ್ಕಾರ ಏನು ಕ್ರಮ ಕೈಗೊಂಡಿತ್ತೋ ಅದೇ ಕ್ರಮವನ್ನು ನಾವು ತೆಗೆದುಕೊಳ್ಳುತ್ತೇವೆ ಎಂದರು.