ಸಾವರ್ಕರ್ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ ಇಂದಿರಾ ಗಾಂಧಿ ಅವರು ಖುದ್ದು ಸಾವರ್ಕರ್ ಹೋರಾಟವನ್ನು ಕೊಂಡಾಡಿ ಅವರೊಬ್ಬ ಅದ್ಭುತ ಸ್ವಾತಂತ್ರ್ಯ ಹೋರಾಟಗಾರ ಎಂದು ಶ್ಲಾಘಿಸಿ ಪತ್ರ ಬರೆದಿದ್ದರು.
ಭಾರತ ಜನನಿಯ ತನುಜಾತೆ ಎಂದ ಕುವೆಂಪುರವರಿಗೆ, ಭಾಷೆಯಲ್ಲ, ಕಾವ್ಯವೇ ನವಮೇಘರೂಪ ಎಂದ ಬೇಂದ್ರೆಯವರಿಗೆ ಪ್ರೇರಣೆಯಾದವರು ಸಾವರ್ಕರ್.ಸಾವರ್ಕರ್‌ರನ್ನು ಅಪಾರವಾಗಿ ಪ್ರೀತಿಸುವವರು, ಗೌರವಿಸುವವರ ಸಾಲಲ್ಲಿ ಗಾಂಧೀಜಿಯೂ ನಿಲ್ಲುತ್ತಾರೆ.
ಕಾಂಗ್ರೆಸ್ ನವರು ಪರದೇಶಿ ಟಿಪ್ಪುವನ್ನು ಹೊಗಳುವವರು, ದೇಶಪ್ರೇಮಿ ಸಾವರ್ಕರ್ ಫೋಟೊ ಕಂಡರೂ ಉರಿದು ಬೀಳುವವರು ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಟಿಪ್ಪು, ಶಾರಿಕ್ ನಂಥವರೇ ದೇವರಾಗಿದ್ದಾರೆಯೇ ವಿನಾ, ದಲಿತರಿಗೂ ಪತಿತ ಪಾವನ ಮಂದಿರ ಕೊಟ್ಟ ಸಾವರ್ಕರ್ ದೇವರಾಗಲಿಲ್ಲ ಎಂದು ಬಿಜೆಪಿ ಯವರು ಕಾಂಗ್ರೆಸ್ ವಿರುದ್ಧ ವ್ಯoಗ್ಯ ಮಾಡಿದರು.