ಬೆಳಗಾವಿ: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬಸ್ ಯಾತ್ರೆಯನ್ನು ನಡೆಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಸಿದ್ದಾರೆ.
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಇದರ ಬಗ್ಗೆ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ನಡೆದ ಸಭೆಯ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಧ್ಯಮಗಳ ಜೊತೆಗೆ ಮಾತನಾಡಿ ತಿಳಿಸಿದರು.
ಡಿಸೆಂಬರ್ 30 ರಂದು ಯಾತ್ರೆ ಶುರುಮಾಡಲಿದ್ದೇವೆ. ಆವತ್ತು ವಿಜಯಪುರದಲ್ಲಿ ಕೃಷ್ಣಾ ನೀರು ಹಂಚಿಕೆ ವಿಚಾರವಾಗಿ, ಮುಂದಿನ ತಿಂಗಳು 2 ರಂದು ಹುಬ್ಬಳ್ಳಿಯಲ್ಲಿ ಮಹದಾಯಿ ಯೋಜನೆ ವಿಚಾರವಾಗಿ ಹೋರಾಟ ಹಮ್ಮಿಕೊಂಡಿದ್ದೇವೆ. ಜ. 8 ರಂದು ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಮಾವೇಶವನ್ನು ಚಿತ್ರದುರ್ಗದಲ್ಲಿ ಹಮ್ಮಿಕೊಂಡಿದ್ದೇವೆ.
ಬೆಳಗಾವಿಯಿಂದ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಬಸ್ ಯಾತ್ರೆ ಆರಂಭಿಸುತ್ತಿದ್ದೇವೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಗಾಂಧೀಜಿ ಅವರು ಇಲ್ಲಿ ಎಐಸಿಸಿ ಸಭೆ ಮಾಡಿದ್ದರು. ಈ ಜಾಗದಲ್ಲಿ ಒಂದು ಇತಿಹಾಸವಿದೆ. ರಾಜ್ಯದಲ್ಲಿ ಜನಪರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಬೆಳಗಾವಿಗೆ ಜ.10 ರಂದು ಆಗಮಿಸಿ 11 ರಿಂದ ಚಿಕ್ಕೋಡಿ ಹಾಗೂ ಬೆಳಗಾವಿಯಲ್ಲಿ ಸಭೆ ಮಾಡಲಿದ್ದೇವೆ ಎಂದು ಹೇಳಿದರು.