ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಜನವರಿ ಮೊದಲ ವಾರದಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ ಕಾಂಗ್ರೆಸ್ ಅನುಸರಿಸಬೇಕಾದ ನಿಯಮಗಳೇನು ಎಂದು ಡಿ.ಕೆ.ಶಿವಕುಮಾರ್ ಅವರು ವಿವರಿಸಿದರು.
ಮಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಶಿಸ್ತು ಉಲ್ಲಂಘಿಸಿದರೆ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ನೊಟೀಸ್ ಇಶ್ಯೂ ಮಾಡುತ್ತೇನೆ ಎಂದು ಹೇಳಿದ್ದಾರೆ.
ಇದರಿಂದ ಪರೋಕ್ಷವಾಗಿ ಕಾಂಗ್ರೆಸ್ ನಾಯಕರ ಮಧ್ಯ ಭಿನ್ನಮತ ಇದೆ ಎಂದು ಎತ್ತಿ ತೋರಿಸಿದ್ದಾರೆ ಎಂಬ ಚರ್ಚೆ ಶುರುವಾಗಿದೆ.