ಬಳ್ಳಾರಿ: ಜಿಲ್ಲೆ ವಿಭಜನೆಯಾದ ನಂತರ, ಮೊದಲ ಬಾರಿಗೆ ಬಳ್ಳಾರಿ ಉತ್ಸವವನ್ನು ಜನವರಿ 21 ಮತ್ತು 22ರಂದು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಸಚಿವ ಬಿ. ಶ್ರೀರಾಮುಲು ಹೇಳಿದರು.
ಎರಡು ದಿನಗಳ ಬಳ್ಳಾರಿ ಉತ್ಸವವನ್ನು ಆಚರಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಒಂದೊಂದು ಜವಾಬ್ದಾರಿಯನ್ನು ತೆಗೆದುಕೊಂಡು ಅದ್ದೂರಿ ಆಚರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.
ಬಳ್ಳಾರಿ ಮತ್ತು ವಿಜಯನಗರ ಒಂದೇ ಆಗಿದ್ದಾಗ ‘ಹಂಪಿ ಉತ್ಸವ’ ನಡೆಯುತ್ತಿತ್ತು. ಈಗ ಇದೇ ಮಾದರಿಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ‘ಬಳ್ಳಾರಿ ಉತ್ಸವ’ವನ್ನು 2 ದಿನಗಳ ಕಾಲ ನಗರದ ಡಾ. ರಾಜ್‍ಕುಮಾರ್ ರಸ್ತೆಯ ಮುನಿಸಿಪಾಲ್ ಕಾಲೇಜು ಮೈದಾನದಲ್ಲಿ ಅದ್ದೂರಿಯಾಗಿ ಆಯೋಜಿಸಲಾಗುವುದು ಎಂದರು .