ನವದೆಹಲಿ: ಚೀನಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಭಾರತದಲ್ಲಿನ ಸ್ಥಿತಿಗತಿ ಕುರಿತು ಚರ್ಚಿಸಿ ಆರೋಗ್ಯ ಸಚಿವರು ಸೂಚನೆ ಕೊಟ್ಟಿದ್ದಾರೆ
ಕೋವಿಡ್–19 ನಿಯಮಾವಳಿಗಳನ್ನು ಪಾಲನೆ ಮಾಡಿ. ಸಾಧ್ಯವಾಗದಿದ್ದರೆ ಭಾರತ್ ಜೋಡೊ ಯಾತ್ರೆಯನ್ನು ನಿಲ್ಲಿಸಿ ಎಂದು ಕಾಂಗ್ರೆಸ್’ಗೆ ಕೇಂದ್ರ ಸರ್ಕಾರ ಬುಧವಾರ ಸೂಚನೆ ನೀಡಿದೆ.
ಈ ಸಂಬಂಧ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಈ ನಡುವೆ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಪಾದಯಾತ್ರೆ ಬುಧವಾರ ಬೆಳಿಗ್ಗೆ ಹರಿಯಾಣ ಪ್ರವೇಶಿಸಿದೆ.