ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಕೋವಿಡ್ ನಿರ್ಬಂಧ ಸಡಿಲಿಕೆ ಮಾಡಲಾಗಿತ್ತು. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಈ ಸಡಿಲಿಕೆ ಮಾಡಲಾಗಿತ್ತು.ಆದ್ರೆ ನೆರೆಯ ದೇಶಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣ ಭಾರೀ ಆತಂಕ ಸೃಷ್ಟಿ ಮಾಡಿದು. ಇದೀಗ ಎಲ್ಲೆಡೆ ಎಚ್ಚರ ವಹಿಸುವಂತ್ತೆ ಕೇಂದ್ರ ಸರ್ಕಾರ ಆದೇಶ ಮಾಡಿದೆ.
ಕೇಂದ್ರ ಸರ್ಕಾರವು ಮಾರ್ಗಸೂಚಿ ಪ್ರಕಟಿಸಿದ್ದು, ಉಷ್ಣಾಂಶ ತಪಾಸಣೆ ಆರಂಭಿಸಲಾಗಿದೆ. ಅದಕ್ಕಾಗಿಯೇ ಪ್ರತ್ಯೇಕ ಕೊಠಡಿ ತೆರೆಯಲಾಗಿದೆ.ವಿದೇಶದಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ವಹಿಸುವಂತ್ತೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.