ತಿರುವನಂತಪುರಂ: 19 ವರ್ಷದ ಯುವತಿಯೊಬ್ಬಳು ತನ್ನ ಒಳಉಡುಪುಗಳಲ್ಲಿ ಬಚ್ಚಿಟ್ಟುಕೊಂಡಿದ್ದ 1 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದು, ಆಕೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ, ಮಲಪ್ಪುರಂ ಪೊಲೀಸ್ ವರಿಷ್ಠಾಧಿಕಾರಿ ಸುಚಿತ್ ದಾಸ್ ಮತ್ತು ಅವರ ತಂಡವು ಭಾನುವಾರ ತಡರಾತ್ರಿ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅನ್ನು ಯಶಸ್ವಿಯಾಗಿ ತೆರವುಗೊಳಿಸಿದ ನಂತರ ಯುವತಿಯನ್ನು ವಶಕ್ಕೆ ತೆಗೆದುಕೊಂಡಿತು.
ನಂತರ ಆಕೆಯನ್ನು ಪರೀಕ್ಷಿಸಿದಾಗ, ಆಕೆಯ ಒಳ ಉಡುಪುಗಳಿಗೆ ಜೋಡಿಸಲಾಗಿದ್ದ ಮೂರು ಪ್ಯಾಕೆಟ್ಗಳಲ್ಲಿ ಒಂದು ಕೋಟಿ ರೂಪಾಯಿ ಮೌಲ್ಯದ 1,884 ಗ್ರಾಂ ಚಿನ್ನವನ್ನು ಬಚ್ಚಿಟ್ಟಿರುವುದು ಪತ್ತೆಯಾಗಿದೆ.
ಕಾಸರಗೋಡು ಮೂಲದ ಶಹಲಾ ಎಂಬ ಯುವತಿ ದುಬೈನಿಂದ ಕೋಯಿಕ್ಕೋಡ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಳು.