ಬೆಂಗಳೂರು: ರಾಜ್ಯದ ಕೆಲವು ಪ್ರದೇಶಗಳನ್ನು ಕೇಂದ್ರಾಡಳಿತ ಮಾಡಬೇಕೆಂದು ಹೇಳಿಕೆ ನೀಡಿದ ಶಿವಸೇನಾ ಮುಖಂಡ ಉದ್ಧವ್ ಠಾಕ್ರೆಗೆ ಮುಂಬಯಿಯಲ್ಲಿ ಮರಾಠಿ ಭಾಷಿಕರು ಎಷ್ಟು ಸಂಖ್ಯೆಯಲ್ಲಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ. ಇದನ್ನು ನಾವು ಪ್ರಶ್ನಿಸಿದರೆ ಅವರಿಗೇ ಸಮಸ್ಯೆಯಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಕೆ. ಅಶ್ವತ್ಥನಾರಾಯಣ ಹೇಳಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿವಿವಾದ ಮುಗಿದ ಅಧ್ಯಾಯ. ಆಗಾಗ ಈ ವಿಚಾರ ತೆಗೆಯುತ್ತ ಅವರಿಗೂ, ಜನರಿಗೂ ಸಮಸ್ಯೆ ತಂದಿಡುತ್ತಿದ್ದಾರೆ. ಜನರ ಬಗ್ಗೆ ಕಾಳಜಿಯಿಲ್ಲದ ಅವರು ರಾಜಕೀಯ ಹಾಗೂ ಸ್ವಾರ್ಥಕ್ಕಾಗಿ ಹೀಗೆ ಮಾಡುತ್ತಿದ್ದಾರೆ.
ಇಂತಹ ನಾಯಕರು ಸಮಾಜಕ್ಕೆ ಸಮಸ್ಯೆ ಹಾಗೂ ಭಾರ. ಬೆಳಗಾವಿ, ನಿಪ್ಪಾಣಿ, ಕಾರವಾರ ಕೇಂದ್ರಾಡಳಿತ ಪ್ರದೇಶವಾಗಬೇಕೆಂಬ ಆಲೋಚನೆ ಅವರಿಗೆ ಹೇಗೆ ಬಂತು ತಿಳಿಯುತ್ತಿಲ್ಲ ಎಂದರು.