ಹುಬ್ಬಳ್ಳಿ: ನಗರದಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕೊರೊನಾ ನಿಯಮಗಳ ಬಗ್ಗೆ ಮಾಹಿತಿ ನೀಡಿದರು.
ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದರು. ಕೋವಿಡ್ ಹೆಸರಲ್ಲಿ ಬಿಜೆಪಿ ಜನರಲ್ಲಿ ಭೀತಿ ಹುಟ್ಟಿಸುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸುಧಾಕರ್, ಅವರಿಗೆ ಅಷ್ಟು ಧೈರ್ಯ ಇದ್ದುದರಿಂದಲೇ ಎರೆಡರಡು ಬಾರಿ ಕೋವಿಡ್ ಆಸ್ಪತ್ರೆಯಲ್ಲಿ ಮಲಗಿದ್ದರು ಎಂದು ವ್ಯಂಗ್ಯ ಮಾಡಿದರು.
ಅಗತ್ಯವಿದ್ದಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರ ಟೆಸ್ಟಿಂಗ್ ಪ್ರಮಾಣ ಏರಿಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಕ್ ಡ್ರಿಲ್ ಪರಿಶೀಲನೆಯ ನಂತರ ಮಾತನಾಡಿದ ಅವರು, ಸದ್ಯ ರಾಂಡಮ್ ಆಗಿ ಟೆಸ್ಟ್ ಮಾಡಲಾಗುತ್ತಿದೆ. ಕೋವಿಡ್ ಪ್ರಮಾಣ ಏರಿಕೆಯಾದಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರ ಟೆಸ್ಟ್ ಪ್ರಮಾಣದಲ್ಲಿಯೂ ಹೆಚ್ಚಳ ಮಾಡಲಾಗುವುದು ಎಂದರು.