ಬೆಳಗಾವಿ: ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ರಾಜ್ಯ ಸರ್ಕಾರ ಅವಕಾಶ ನೀಡುತ್ತಿಲ್ಲ ಎಂದು ಶಾಸಕ ಪ್ರಿಯಾಂಕ ಖರ್ಗೆ ಗುರುವಾರ ಅಸಮಾಧಾನ ವ್ಯಕ್ತಪಡಿಸಿದರು.
ಮುಖ್ಯಮಂತ್ರಿಗಳು ದೆಹಲಿ ಪ್ರವಾಸದ ನಂತರ ಅಧಿವೇಶನವನ್ನು ಮೊಟಕುಗೊಳಿಸುವ ತೀರ್ಮಾನ ಮಾಡಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಧ್ವನಿ ಎತ್ತಲಿಲ್ಲ ಎನ್ನುವ ಆರೋಪವನ್ನು ನಿರಾಕರಿಸಿದ ಅವರು, ರೈತರ ಸಮಸ್ಯೆ ವಿಚಾರ ಅಧಿವೇಶನದ ಮೊದಲ ಪ್ರಶ್ನೆಯಾಗಿತ್ತು. ಆದರೆ, ರೈತರ ವಿಚಾರ ಮುಂದೂಡಿ, ಕುಕ್ಕರ್ ಸ್ಪೋಟ ವಿಚಾರಕ್ಕೆ ಆದ್ಯತೆ ನೀಡಲಾಯಿತು ಎಂದು ಆರೋಪಿಸಿದರು.