ಬೆಂಗಳೂರು: ಸಾವಿರದ 500 ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ. ಟ್ರಾಫಿಕ್ ನ ಎಲ್ಲಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.ಮಧ್ಯರಾತ್ರಿ 1 ಗಂಟೆಯ ತನಕ ಮಾತ್ರ ಅವಕಾಶ ನೀಡಲಾಗುತ್ತಿದೆ.
ಶಬ್ದಮಾಲಿನ್ಯ ನಿಯಂತ್ರಣಕ್ಕೆ ಎಸಿಪಿ ಮಟ್ಟದಲ್ಲಿ ಟೀಂ ಮಾಡಲಾಗಿದೆ. ಜನಸಂದಣಿಯ ಬಗ್ಗೆ ಸಾಕಷ್ಟು ಎಚ್ಚರಿಕೆ ವಹಿಸಲಾಗಿದೆ. 4,000 ಕ್ಯಾಮರಾ ಸಿಸಿ ಟಿವಿ ಕ್ಯಾಮೆರಾ ಗಳನ್ನು ಹಾಕಲಾಗುತ್ತೆ. ಬೆಂಗಳೂರು ಎಲ್ಲಾ ಕಡೆಯೂ ಹೈಕ್ವಾಲಿಟಿ ಕ್ಯಾಮೆರಾಗಳು ಇವೆ. ಮಹಿಳೆಯರಿಗೆ ಐ ಲ್ಯಾಂಡ್ಸ್ ಗಳು ಇರುತ್ತೆ, ಟವರ್ ವಾಚ್ ಗಳು ಇರುತ್ತೆ ಎಂದು ವಿವರಿಸಿದರು.
ರಸ್ತೆಯ ಬದಿಯಲ್ಲಿ ಅನುಮಾನಾಸ್ಪದ ವಸ್ತುಗಳು ಕಂಡರೆ ತಕ್ಷಣ ಪೊಲೀಸರಿಗೆ ತಿಳಿಸಿ. ಪೊಲೀಸರು ತಕ್ಷಣವೇ ಕಾರ್ಯ ಪ್ರವೃತ್ತರಾಗುತ್ತಾರೆ. ಅನುಮಾನಸ್ಪದ ವಸ್ತುಗಳ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ಇದೇ ವೇಳೆ ಅವರು ವಿನಂತಿಸಿಕೊಂಡರು.
ರಾತ್ರಿ 9 ಗಂಟೆಯ ಬಳಿಕ ಇಂಟರ್ ನ್ಯಾಶನಲ್ ಏರ್ ಪೋರ್ಟ್ ಪ್ಲೈಓವರ್ ಹೊರತು ಪಡಿಸಿ ಎಲ್ಲಾ ಪ್ಲೈ ಓವರ್ ಬಂದ್ ಮಾಡಲಾಗುವುದು.
ಎಲಿವೇಟೆಡ್ ರಸ್ತೆಯಲ್ಲಿ 9 ಗಂಟೆಯ ನಂತರ ಸಂಚಾರಕ್ಕೆ ಅವಕಾಶ ಇಲ್ಲ. ರಾತ್ರಿ 9 ಗಂಟೆಯ ನಂತರ ನೈಸ್ ರೋಡ್ ದ್ವಿಚಕ್ರ ವಾಹನ ಇಲ್ಲ. ಡ್ರ್ಯಾಗ್ ರೈಸಿಂಗ್ ಬಗ್ಗೆ ಎಚ್ಚರಿಕೆ ವಹಿಸಲಾಗಿದೆ. ಡ್ರಿಂಕ್ ಅಂಡ್ ಡ್ರೈವ್ ಚೆಕ್ ಮಾಡಲಾಗುತ್ತೆ ಎಂದು ತಿಳಿಸಿದರು.