ನವದೆಹಲಿ: ದೇಶಾದ್ಯಂತ ಬಿಜೆಪಿ ವಿರುದ್ಧ ದೊಡ್ಡ ಮಟ್ಟದ ಮೌನ ಅಲೆ. ಜನ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಶನಿವಾರ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಹೇಳಿದ್ದಾರೆ.
ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಬಿಜೆಪಿಗೆ ಪರ್ಯಾಯವಾಗುವ ದೃಷ್ಟಿಕೋನವನ್ನು ಪ್ರಸ್ತುತಪಡಿಸಲು ಪ್ರತಿಪಕ್ಷಗಳು ಒಂದಾಗಬೇಕು. ಭಾರತ್ ಜೋಡೋ ಯಾತ್ರೆಯು ಜನರಿಗೆ ಹೊಸ ರೀತಿಯ ಕೆಲಸ ಮತ್ತು ಚಿಂತನೆಯನ್ನು ಪ್ರಸ್ತುತಪಡಿಸಲು ಚೌಕಟ್ಟನ್ನು ಒದಗಿಸಿದೆ ಎಂದು ಹೇಳಿದರು.
ದೇಶದ ರಾಜಕೀಯದಲ್ಲಿ ಸಂಪೂರ್ಣವಾಗಿ ಪ್ರಾಬಲ್ಯ ಸಾಧಿಸುತ್ತಿರುವ ಬಿಜೆಪಿಯನ್ನು ಎದುರಿಸಲು ವಿರೋಧ ಪಕ್ಷಗಳ ನಾಯಕರು ಮತ್ತು ಕಾಂಗ್ರೆಸ್ ನಡುವೆ ಪರಸ್ಪರ ಗೌರವಿಸಲು ತಾವು ಬಯಸುವುದಾಗಿ ರಾಹುಲ್ ಗಾಂಧಿ ತಿಳಿಸಿದರು.