ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.
‘ಸಂವಿಧಾನದ 370 ನೇ ವಿಧಿಯಡಿ ಇದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲು ರಾಷ್ಟ್ರಪತಿಯವರು ಸಾಂವಿಧಾನಿಕ ಆದೇಶ ಹೊರಡಿಸುವ ಅಧಿಕಾರ ಹೊಂದಿದ್ದಾರೆ’ ಎಂದು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠ ಹೇಳಿದೆ.
‘ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಶೀಘ್ರವೇ ಮರುಸ್ಥಾಪಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಲಾಗುವುದು. ಹಾಗೆಯೇ, ಅಲ್ಲಿನ ವಿಧಾನಸಭೆಗೆ 2024ರ ಸೆಪ್ಟೆಂಬರ್ 30ರ ಒಳಗೆ ಚುನಾವಣೆ ನಡೆಸಲು ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಲಾಗುವುದು’ ಎಂದು ತೀರ್ಪು ಪ್ರಕಟಿಸುವ ವೇಳೆ ಸಿಜೆಐ ಹೇಳಿದ್ದಾರೆ.