ಶೀಘ್ರದಲ್ಲೇ ಮೀಸಲಾತಿ ಹೆಚ್ಚಳ : ಪ್ರಸನ್ನಾನಂದಪುರಿ ಶ್ರೀ ಹೇಳಿಕೆ

ಹರಪನಹಳ್ಳಿ: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮುದಾಯಕ್ಕೆ ಶೀಘ್ರದಲ್ಲೇ 7.5 ಮೀಸಲಾತಿ ಹೆಚ್ಚಳ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಶ್ರೀಗಳು ತಿಳಿಸಿದ್ದಾರೆ.

ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ನೀಲಗುಂದ ತಳವಾರ ಹಾಲಪ್ಪ ಅವರ ಮಳಿಗೆಯಲ್ಲಿ ನೂತನವಾಗಿ ಪ್ರರಂಭವಾಗಿರುವ ಶ್ರೀ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ಸಹಕಾರಿ ಸಂಘದ ಕಛೇರಿಗೆ ಭೇಟಿ ನೀಡಿ ಶುಭ ಕೋರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಾಲ್ಮೀಕಿ ನಾಯಕ ಸಮುದಾಯಕ್ಕೆ 7.5 ಮೀಸಲಾತಿ ಸಂಬಂಧ ಇತ್ತೀಚಿಗೆ ಸಮಾಜದ ಶಾಸಕರು, ಸಂಸದರು ಹಾಗೂ ಮುಖಂಡರೊಂದಿಗೆ ನಿಯೋಗ ತೆರಳಿ ನೂತನ ಮುಖ್ಯಮಂತ್ರಿ ಬಸ‌ವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಅವರು ಶೀಘ್ರದಲ್ಲೇ ಮೀಸಲಾತಿ ಹೆಚ್ಚಳ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಈಗಾಗಲೇ ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಹಾಗೂ ಆರ್ಥಿಕ ನೀತಿಯನ್ನು ಜಾರಿಗೆ ತಂದಿದೆಯೋ ಅದೇ ಮಾದರಿಯಲ್ಲಿ ರಾಜ್ಯದಲ್ಲಿಯೂ ಸಹ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಳ ಮಾಡಬೇಕು ಎಂಬುದು ಅಖಂಡ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದವರ ಒತ್ತಾಯವಾಗಿದೆ ಎಂದ ಅವರು ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವ ಕುರಿತು ಈಗಾಗಲೇ ತುಂಬಾ ವಿಳಂಬವಾಗಿದ್ದು ಸರ್ಕಾರ ಕೂಡಲೇ ಮೀಸಲಾತಿ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ವಾಲ್ಮೀಕಿ ನಾಯಕ ಸಮಾಜದ ತಾಲೂಕು ಅಧ್ಯಕ್ಷ ಕೆ.ಉಚ್ಚಂಗೆಪ್ಪ, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಬಸವರಾಜ ಸಂಗಪ್ಪನವರ್, ಇಸಿಒ ಮಂಜುನಾಥ್ ಗೀರಜ್ಜಿ, ವಕೀಲರಾದ ಎಂ‌.ಪ್ರಾಣೇಶ್, ನೀಲಗುಂದ ಟಿ.ಮನೋಜ್, ಗುತ್ತಿಗೆದಾರ ಬಾಣದ ಅಂಜಿನಪ್ಪ, ನಿವೃತ್ತ ಮುಖ್ಯೋಪಾಧ್ಯಾಯ ಆನಂದಪ್ಪ, ಏಕಲವ್ಯ ಸಂಘರ್ಷ ಸಮಿತಿಯ ಅಧ್ಯಕ್ಷ ರಾಯದುರ್ಗದ ಪ್ರಕಾಶ್, ಕೆಂಚಪ್ಪ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Discover more from Valmiki Mithra

Subscribe now to keep reading and get access to the full archive.

Continue reading