ಕೈಗಾರಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗುತ್ತಿದ್ದು ಅರಣ್ಯ ನಾಶದಿಂದ ಪರಿಸರ ಸಮತೋಲನ ಏರುಪೇರಾಗುವುದರಿಂದ ಹಲವಾರು ತೊಂದರೆ ಉಂಟಾಗುತ್ತದೆ ಮುಂದಿನ ದಿನಗಳಲ್ಲಿ ನಮ್ಮ ಮುಂದಿನ ಪೀಳಿಗೆಯ ರಕ್ಷಣೆಗಾಗಿ ಅರಣ್ಯ ಉಳಿಸಿ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪಂಪಣ್ಣ ಹೇಳಿದರು
ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿಯವರ ಹುಟ್ಟು ಹಬ್ಬದ ಪ್ರಯುಕ್ತ ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಸಸಿಗಳನ್ನು ವಿತರಿಸಿ ಮಾತನಾಡಿದರು
ಈ ಸಂದರ್ಭದಲ್ಲಿ ಶರಣು ನಾಯಕ, ಅಂಜಿ ನಾಯಕ, ಉಮೇಶ ಬಂಡಿ, ಶಂಕರ ಪೂಜಾರಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು