Notice: Function _load_textdomain_just_in_time was called incorrectly. Translation loading for the colornews domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121

Warning: Cannot modify header information - headers already sent by (output started at /home/jegprscn/public_html/wp-includes/functions.php:6121) in /home/jegprscn/public_html/wp-includes/feed-rss2.php on line 8
basavaraj bommai cm Archives - Valmiki Mithra https://valmikimithra.com/archives/tag/basavaraj-bommai-cm News Paper Fri, 09 Dec 2022 10:11:59 +0000 en-US hourly 1 https://wordpress.org/?v=6.8.1 https://i0.wp.com/valmikimithra.com/wp-content/uploads/2021/07/cropped-WhatsApp-Image-2021-07-16-at-11.33.21-1.jpeg?fit=32%2C32&ssl=1 basavaraj bommai cm Archives - Valmiki Mithra https://valmikimithra.com/archives/tag/basavaraj-bommai-cm 32 32 207262515 ಬಡವರಿಗೆ ಸುಲಭ ದರದಲ್ಲಿ ಚಿಕಿತ್ಸೆ ನೀಡಲು ಯೋಜನೆ ರೂಪಿಸಬೇಕು- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ https://valmikimithra.com/archives/6501 Fri, 09 Dec 2022 10:11:59 +0000 https://valmikimithra.com/?p=6501 ತುಮಕೂರು: ವೈದ್ಯಕೀಯ ಕ್ಷೇತ್ರದ ಎಲ್ಲರೂ ಬಡವರಿಗೆ ಸುಲಭ ದರದಲ್ಲಿ ಚಿಕಿತ್ಸೆ ನೀಡಲು ಯೋಜನೆ ರೂಪಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು. ಅವರು ಇಂದು ತುಮಕೂರಿನ ಶೆಟ್ಟಿಹಳ್ಳಿಯಲ್ಲಿ ನಾರಾಯಣ ದೇವಾಲಯ- ಉಚಿತ

The post ಬಡವರಿಗೆ ಸುಲಭ ದರದಲ್ಲಿ ಚಿಕಿತ್ಸೆ ನೀಡಲು ಯೋಜನೆ ರೂಪಿಸಬೇಕು- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ appeared first on Valmiki Mithra.

]]>
ತುಮಕೂರು: ವೈದ್ಯಕೀಯ ಕ್ಷೇತ್ರದ ಎಲ್ಲರೂ ಬಡವರಿಗೆ ಸುಲಭ ದರದಲ್ಲಿ ಚಿಕಿತ್ಸೆ ನೀಡಲು ಯೋಜನೆ ರೂಪಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು. ಅವರು ಇಂದು ತುಮಕೂರಿನ ಶೆಟ್ಟಿಹಳ್ಳಿಯಲ್ಲಿ ನಾರಾಯಣ ದೇವಾಲಯ- ಉಚಿತ ನೇತ್ರ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.

ನಾರಾಯಣ‌ ನೇತ್ರಾಲಯ ಒಂದು ಹೆಜ್ಜೆ ಮುಂದೆ ಹೋಗಿ ಉಚಿತ‌ ಚಿಕಿತ್ಸೆ ನೀಡುತ್ತಿದ್ದಾರೆ. ಇದಕ್ಕಿಂತ ಉದಾಹರಣೆ ಮತ್ತೊಂದಿಲ್ಲ. ಡಾ: ಭುಜಂಗ ಶೆಟ್ಟಿಯವರು ತಮ್ಮ ವೃತ್ತಿ ಯಲ್ಲಿ ಯಶಸ್ವಿಯಾಗಿದ್ದಾರೆ. ಯಶಸ್ಸು ಪಡೆದವರೆಲ್ಲಾ ಬದುಕಿನಲ್ಲಿ ಸಮಾಜಕ್ಕೆ ಹಿಂತಿರುಗಿಸಿ ನೀಡಬೇಕೆಂಬ ಸಣ್ಣ ಗುಣಧರ್ಮವಿದ್ದರೆ , ಈ ಜಗತ್ತು ಇನ್ನಷ್ಟು ಉತ್ತಮವಾಗುತ್ತದೆ. ಎಲ್ಲರಿಗೂ ಶ್ರೀಮಂತಿಕೆನಿರುವುದಿಲ್ಲ. ಅಂತಿಮವಾಗಿ ನಮ್ಮ ದುಡಿಮೆ, ಶ್ರೀಮಂತಿಕೆ ಸೃಷ್ಟಿಗೆ ಸೇರಿದ್ದು. ನಾವು ಸೃಷ್ಟಿಯ ಭಾಗವಷ್ಟೇ.ಭುಜಂಗಶೆಟ್ಟಿ ಯವರಿಗೆ ನಾನು ಎನ್ನುವ ಭಾವವಿಲ್ಲ. ಕೃತಿಯಲ್ಲಿ ಮಾಡುವ ದೊಡ್ಡ ಗುಣ ಅವರು ಹಾಗೂ ಅವರ ಕುಟುಂಬದವರಿಗೆ ಇದೆ ಎಂದರು.

ನಮ್ಮ ಸರ್ಕಾರ ಕಣ್ಣಿನ ಚಿಕಿತ್ಸೆಗೆ ಯೋಜನೆ ರೂಪಿಸಿದ್ದೇವೆ. 60 ವರ್ಷ ಮೇಲ್ಪಟ್ಟವರಿಗೆ ಕಣ್ಣಿನ ತಪಾಸಣೆ, ಚಿಕಿತ್ಸೆ, ಉಚಿತ ಕನ್ನಡಕ ನೀಡುವ ಯೋಜನೆ ಜನವರಿಯಲ್ಲಿ ಉದ್ಘಾಟನೆಗೊಳ್ಳಲಿದೆ. ಈ ಯೋಜನೆಗೆ ಡಾ.‌ಭುಜಂಗಶೆಟ್ಟಿ ಅವರು ಮೆಂಟರ್ ಆಗಿ ಬರಬೇಕು. ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಈ ಯೋಜನೆ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಯಾಗಿದೆ.

ಕಿವಿಯ ಸಮಸ್ಯೆಗೆ ಕಾಕ್ಲಿಯರ್ ಇಂಪ್ಲಾಂಟ್ ಮಾಡುವ ಯೋಜನೆ 500 ಕೋಟಿ ರೂ.ಗಳ ಯೋಜನೆ ರೂಪಿಸಿದ್ದೇವೆ. ನಮ್ಮ ಸರ್ಕಾರ ಅತ್ಯಂತ ಸೂಕ್ಷ್ಮ ವಿಚಾರಗಳ‌ ಕಡೆಗೆ ಹೆಚ್ಚಿನ ಗಮನ ನೀಡಿದ್ದೇವೆ.ಡಯಾಲಿಸಿಸ್ ಸೈಕಲ್ ನ್ನು 30 ಸಾವಿರದಿಂದ 60 ಸಾವಿರಕ್ಕೆ ಹೆಚ್ಚಿಸಲಾಗಿದೆ. ಕ್ಯಾನ್ಸರ್ ಚಿಕಿತ್ಸೆಗೆ 12 ಹೊಸ ಕೇಂದ್ರಗಳನ್ನು ತೆರೆದು ಕೀಮೋಥೆರಪಿ ಸೈಕಲ್ ಗಳನ್ನು ದುಪ್ಪಟ್ಟು ಮಾಡಲಾಗಿದೆ. ಸಾಮಾನ್ಯ ಆರೋಗ್ಯ ತಪಾಸಣೆಯನ್ನು ಪ್ರರಿ ತಾಲ್ಲೂಕು ಹಾಗೂ ಜಿಲ್ಲೆಗಳಲ್ಲಿ ಕೈಗೊಳ್ಳಲು ಆದೇಶ ಹೊರಡಿಸಿದೆ. 100 ಪಿ.ಹೆಚ್.ಸಿ ಕೇಂದ್ರಗಳನ್ನು ಸಿ.ಹೆಚ್.ಸಿ ಕೇಂದ್ರಗಳಾಗಿ ತಲಾ 10.ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗಿದೆ. ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ ಹಾಗೂ ರೋಗಿಗಳಿಗೆ ಚಿಕಿತ್ಸೆ ನೀಡುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ ಎಂದರು.

ಜಗತ್ತಿನಲ್ಲಿ ಅತಿ ಹೆಚ್ಚು ಕಣ್ಣಿನ ರೋಗ, ಕುರುಡುತ ಮಕ್ಕಳಿಗೆ ಬರುವುದು ಅಪೌಷ್ಟಿಕತೆಯಿಂದ. ಆದ್ದರಿಂದ ನಮ್ಮ ಸರ್ಕಾರ ಅಪೌಷ್ಟಿಕತೆ ನಿವಾರಣೆಗೆ ವಿಶೇಷ ಆಹಾರ ಹಾಗೂ ಔಷಧ ನೀಡುವ ಯೋಜನೆ ರೂಪಿಸಿದ್ದೇವೆ. ಅಪೌಷ್ಟಿಕತೆಯಿಂದಾಗುವ ಕಣ್ಣಿನ ತೊಂದರೆ ನಿವಾರಣೆಗೆ ವಿಶೇಷ ಕಾರ್ಯಕ್ರಮ ಪ್ರಾರಂಭವಾಗಿದೆ. ಆರು ಜಿಲ್ಲೆಗಳಲ್ಲಿ ಅಪೌಷ್ಟಿಕತೆ ಹೆಚ್ಚಿರುವ ಅದರ ನಿವಾರಣೆಗೆ ವಿಶೇಷ ಯೋಜನೆ ರೂಪಿಸಲಾಗಿದೆ.ಕೋವಿಡ್ ನ್ನು ಅತ್ಯಂತ ಯಶಸ್ವಿಯಾಗಿ ನಮ್ಮ ಸರ್ಕಾರ ನಿಭಾಯಿಸಿದೆ. ಸಿದ್ದಗಂಗಾ ಸ್ವಾಮೀಜಿ ಗಳು ಆಸ್ಪತ್ರೆಗೆ ಸ್ಥಳ ನೀಡಿ ಆಶೀರ್ವಾದ ಮಾಡಿದ್ದಾರೆ ಎಂದರು.

*ಪರೋಪಕಾರಿ ಗುಣ*
ಡಾ ಭುಜಂಗ ಶೆಟ್ಟಿಯವರು ರಾಜ್ಯದ ಎಲ್ಲ‌ ಜಿಲ್ಲೆಗಳಲ್ಲಿ ಉಚಿತ ಆಸ್ಪತ್ರೆ ತೆರೆಯುವುದಾಗಿ ಹೇಳಿದ್ದಾರೆ‌. ಕರ್ನಾಟಕ ಆರೋಗ್ಯ ಕರ್ನಾಟಕ ವಾಗಲಿ. ದೇವರು ಆ ಶಕ್ತಿ ನೀಡಲಿ. ಅಂಧರ ಬಾಳಿಗೆ ಇದು ಜ್ಯೋತಿಯಾಗಿ ಬೆಳಗಲಿ ಎಂದರು.
ಮಾನವ ದೇಹದಲ್ಲಿ ಹೃದಯದ ನಂತರ ಕಣ್ಣು. ಕಣ್ಣಿನಿಂದ‌ ಕೇವಲ ನೋಟವಷ್ಟೆ ಅಲ್ಲ, ಜ್ಞಾನವೂ ಪ್ರಾಪ್ತಿ ಯಾಗುತ್ತದೆ. ಕಣ್ಣಿಲ್ಲದಿದ್ದರೆ ಶಿಕ್ಷಣ, ಸಾಹಿತ್ಯ ಇರುತ್ತಿರಲಿಲ್ಲ. ಇವೆರಡೂ ಇರದಿದ್ದರೆ ಸುಸಂಸ್ಕೃತ ಸಮಾಜದ ನಿರ್ಮಾಣವೂ ಆಗುತ್ತಿರಲಿಲ್ಲ.

ಕಣ್ಣಿನ ಚಟುವಟಿಕೆಗಳು ಬಹಳ ಸೂಕ್ಷ್ಮ. ವಯಸ್ಸಾದಂತೆ ಕಣ್ಣು ಗಳಿಗೆ ಆಗುವ ತೊಂದರೆಯಿಂದ ಹಿಡಿದು ಹಲವಾರು ಸಂದರ್ಭಗಳಲ್ಲಿ ಕಣ್ಣಿಗೆ ಬರುವ ಆಪತ್ತುಗಳ ನಿವಾರಣೆ ಮಾಡುವ ತಂತ್ರಜ್ಞಾನ ಜಗತ್ತಿನಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆದಿದೆ.
ರಾಜ್ಯದಲ್ಲಿ ಡಾ. ಭುಜಂಗಶೆಟ್ಟಿ ಅವರು 25 ವರ್ಷಗಳಿಗೂ ಹೆಚ್ಚು ಕಣ್ಣಿನ ರೋಗಗಳ ನಿವಾರಣೆಗೆ ಬಹಳ ದೊಡ್ಡ ಸೇವೆ ಮಾಡುತ್ತಿದ್ದಾರೆ. ಕಣ್ಣಿನ ದಾನ ಮಾಡುವ ಬಗ್ಗೆ ದೊಡ್ಡ ಅಭಿಯಾನ ಮಾಡಿದವರು ಅವರು, ಡಾ. ರಾಜಕುಮಾರ್ ಅವರಿಂದ ಹಿಡಿದು ಪುನೀತ್ ರಾಜ್ ಕುಮಾರ್ ವರೆಗೂ ಕಣ್ಣಿನ ದಾನ ಮಾಡುವ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳು ಅಭಿನಂದಿಸಿದರು.

*ಸಂಪೂರ್ಣ ಉಚಿತ ಕಣ್ಣಿನ ಆಸ್ಪತ್ರೆ*
ಇದು ಸಂಪೂರ್ಣ ಉಚಿತ ಆಸ್ಪತ್ರೆ ಇಲ್ಲಿ ಕ್ಯಾಶ್ ಕೌಂಟರ್ ಇರುವುದಿಲ್ಲ ಎಂದು ತಿಳಿದಾಗ ಇದು ಹೇಗೆ ಸಾಧ್ಯ ಎಂದು ಆಶ್ಚರ್ಯವಾಯಿತು. ಶೇ 100 ರಷ್ಟು ಅವರ ದುಡಿಮೆಯಿಂದ ಪುಣ್ಯದ ಕಾರ್ಯವಾಗಿ ಈ ಕೆಲಸ ಮಾಡುತ್ತಿರುವುದು ತಿಳಿದು ಹೃದಯ ತುಂಬಿ ಬಂದಿತು. ಈ ರೀತಿಯ ಆಸ್ಪತ್ರೆ ರಾಜ್ಯದಲ್ಲಿ ಎಲ್ಲಿಯೂ ಇಲ್ಲ. ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ಮಾಡುತ್ತಾರೆ. ಆದರೆ ಎಲ್ಲಾ ರೀತಿಯ ಆಧುನಿಕ ವ್ಯವಸ್ಥೆಯನ್ನು ಒಳಗೊಂಡ ಆಸ್ಪತ್ರೆ ಇದಾಗಿದೆ‌. ಬಡವರಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡಬೇಕೆನ್ನುವ ತೀರ್ಮಾನ ಮಾದರಿಯಾಗಿದೆ. ಎಲ್ಲಾ ಯಶಸ್ವಿ ವೈದ್ಯರು ಇದನ್ನು ಅನುಸರಿಸಬೇಕು ಎಂದರು.

ಬಡವರು ಉತ್ತಮ ವೈದ್ಯಕೀಯ ಸೇವೆ ಪಡೆಯಲು ಗಂಭೀರವಾಗಿ ಚಿಂತನೆ ಅಗತ್ಯ*
ವೈದ್ಯರು ಉತ್ತಮ ಸೇವೆಯನ್ನು ಕಡಿಮೆ ದರದಲ್ಲಿ ನೀಡುವ ಕೆಲಸ ಮಾಡಬೇಕು. ವೈದ್ಯಕೀಯ ಸೇವೆ ಅತ್ಯಂತ ದುಬಾರಿಯಾಗಿದೆ. ದೊಡ್ಡ ಪ್ರಮಾಣದ ಹಣ ಅಗತ್ಯವಿದೆ. ಬಡವರು ಉತ್ತಮ ವೈದ್ಯಕೀಯ ಸೇವೆ ಪಡೆಯಲು ಸಾಧ್ಯವಾಗದಂತಾಗಿದೆ. ಈ ಬಗ್ಗೆ ನಾವು ಗಂಭೀರವಾಗಿ ಚಿಂತನೆ. ಮಾಡಬೇಕಿದೆ. ನಮ್ಮ ಬಂಧುಗಳಿಗೆ ಆರ್ಥಿಕ ವ್ಯವಸ್ಥೆ ಇಲ್ಲದ ಕಾರಣ ರೋಗದಿಂದ ನರಳಿ ಸಾವನಪ್ಪುವುದನ್ನು ನೋಡಿ ಸುಮ್ಮನಿರಲು ಸಾಧ್ಯವಿಲ್ಲ.
ಇಡೀ ರಾಜ್ಯ ಹಾಗೂ ರಾಷ್ಟ್ರದಲ್ಲಿ ಚಿಂತನೆಯಾಗಬೇಕು. ಔಷಧಗಳ ಆರ್. ಅಂಡ್ ಡಿ ಯಿಂದ ಹಿಡಿದು, ಪರಿಕರಗಳ ಉತ್ಪಾದನೆ ಹಾಗೂ ವೈದ್ಯರು ಕೂಡ ಈ ಬಗ್ಗೆ ಚಿಂತನೆ ಮಾಡಬೇಕು ಎಂದರು.

*ಬಡವರಿಗೆ ಸುಲಭ ದರದಲ್ಲಿ ಚಿಕಿತ್ಸೆ ದೊರೆಯಬೇಕು*
ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ನಮ್ಮ ಪ್ರಧಾನ ಮಂತ್ರಿ ಅವರು ಆಯುಷ್ಮಾನ್ ಭಾರತ ಯೋಜನೆಯಡಿ 5 ಲಕ್ಷ ರೂವರೆಗೂ ಬಡವರ ಚಿಕಿತ್ಸೆಗಾಗಿ ಜಾರಿಗೊಳಿಸಿದ್ದಾರೆ. ರಾಜ್ಯ ದಲ್ಲಿ 5 ಕೋಟಿ ಕಾರ್ಡುಗಳನ್ನು ನೀಡುವ ಗುರಿ ಇದ್ದು, ಈಗಾಗಲೇ ಒಂದು ಕೋಟಿ ಕಾರ್ಡ್ ನೀಡಿದ್ದೇವೆ. ಇದೊಂದು ಕಡೆಯಾದರೆ, ಸಾಮಾನ್ಯ ಜನರಿಗೆ ಯಾವುದೇ ತೊಂದರೆ ಇಲ್ಲದೆ ನೇರವಾಗಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಬೇಕಾದರೆ ಅವರಿಗೆ ಸುಲಭ ದರದಲ್ಲಿ ಚಿಕಿತ್ಸೆ ದೊರೆಯುವುದು ಮುಖ್ಯ ಎಂದರು.

ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಸಚಿವರಾದ ಬಿ.ಸಿ.ನಾಗೇಶ್, ಗೋವಿಂದ ಕಾರಜೋಳ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ: ಸಿ.ಸೋಮಶೇಖರ್, ನಾರಾಯಣ ನೇತ್ರಾಲಯ ಆಸ್ಪತ್ರೆಯ ಹಿರಿಯ ವೈದ್ಯ ಡಾ: ಭುಜಂಗಶೆಟ್ಟಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

The post ಬಡವರಿಗೆ ಸುಲಭ ದರದಲ್ಲಿ ಚಿಕಿತ್ಸೆ ನೀಡಲು ಯೋಜನೆ ರೂಪಿಸಬೇಕು- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ appeared first on Valmiki Mithra.

]]>
6501
ಕೇಂದ್ರ ತನಿಖಾ ಸಂಸ್ಥೆಗಳಿಗೆ ಅಗತ್ಯ ಮಾಹಿತಿ ನೀಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಸೂಚನೆ..! https://valmikimithra.com/archives/6148 Mon, 21 Nov 2022 09:05:19 +0000 https://valmikimithra.com/?p=6148 ಬೆಂಗಳೂರು: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿ ಬಳಿ ಆಟೋದಲ್ಲಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ತನಿಖಾ ಸಂಸ್ಥೆಗಳಿಗೆ ಅಗತ್ಯ ಮಾಹಿತಿ ನೀಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಸೂಚಿಸಿದ್ದಾರೆ. ಕೇಂದ್ರ

The post ಕೇಂದ್ರ ತನಿಖಾ ಸಂಸ್ಥೆಗಳಿಗೆ ಅಗತ್ಯ ಮಾಹಿತಿ ನೀಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಸೂಚನೆ..! appeared first on Valmiki Mithra.

]]>
ಬೆಂಗಳೂರು: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿ ಬಳಿ ಆಟೋದಲ್ಲಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ತನಿಖಾ ಸಂಸ್ಥೆಗಳಿಗೆ ಅಗತ್ಯ ಮಾಹಿತಿ ನೀಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಸೂಚಿಸಿದ್ದಾರೆ.

ಕೇಂದ್ರ ತನಿಖಾ ಸಂಸ್ಥೆಗಳಿಗೆ ಮಾಹಿತಿ ಒದಗಿಸಲು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್‍ಕುಮಾರ್ ಅವರ ಜೊತೆ ಸಮನ್ವಯ ಸಾಧಿಸಬೇಕು. ಇದೊಂದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಎಚ್ಚರಿಕೆ ಹೆಜ್ಜೆ ಇಡಬೇಕೆಂದು ಸೂದ್ ಅವರಿಗೆ ಸಿಎಂ ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಪ್ರತಿಕ್ಷಣದ ಮಾಹಿತಿಯನ್ನು ತಮಗೆ ಒದಗಿಸಬೇಕು. ತನಿಖಾ ಪ್ರಗತಿ ವರದಿ ಯಾವ ಹಂತದಲ್ಲಿದೆ. ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ಉಗ್ರನ ಹಿನ್ನಲೆ, ಈತನ ಹಿಂದೆ ಯಾರಾದರೂ ಉಗ್ರರು ಇದ್ದಾರೆಯೇ? ಯಾವ ಸಂಘಟನೆಗೆ ಸೇರಿದವರು, ಇವರ ಉದ್ದೇಶ ಎಂಬುದರ ಬಗ್ಗೆ ಇಂಚಿಂಚು ಮಾಹಿತಿ ನೀಡಬೇಕೆಂದು ಸೂಚನೆ ನೀಡಿದ್ದಾರೆ.

ಈಗಾಗಲೇ ಮಂಗಳೂರುನಗರ ಪೊಲೀಸ್ ಆಯುಕ್ತರಾದ ಶಶಿಕುಮಾರ್, ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್‍ಕುಮಾರ್ ಹಾಗೂ ಶಿವಮೊಗ್ಗ ಮತ್ತು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದಲೂ ನಾವು ಮಾಹಿತಿ ಪಡೆದಿದ್ದೇವೆ ಎಂದರು

The post ಕೇಂದ್ರ ತನಿಖಾ ಸಂಸ್ಥೆಗಳಿಗೆ ಅಗತ್ಯ ಮಾಹಿತಿ ನೀಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಸೂಚನೆ..! appeared first on Valmiki Mithra.

]]>
6148
ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ https://valmikimithra.com/archives/5784 Thu, 15 Sep 2022 05:05:41 +0000 https://valmikimithra.com/?p=5784 ಬೆಂಗಳೂರು: ನಗರದಲ್ಲಿ ಪ್ರವಾಹ ತಡೆಯಲು ಮನೆಗಳನ್ನು ನೆಲಸಮ ಮಾಡುವುದೇ ಪರಿಹಾರವಲ್ಲ. ರಾಜಕಾಲುವೆಗಳ ನೀರು ಹರಿಸಲು ಪರ್ಯಾಯ ಜಾಗ ಲಭ್ಯವಿದ್ದಲ್ಲಿ ಮನೆ ಕೆಡಹುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅತಿವೃಷ್ಟಿ ಮತ್ತು ಪ್ರವಾಹದ

The post ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ appeared first on Valmiki Mithra.

]]>
ಬೆಂಗಳೂರು: ನಗರದಲ್ಲಿ ಪ್ರವಾಹ ತಡೆಯಲು ಮನೆಗಳನ್ನು ನೆಲಸಮ ಮಾಡುವುದೇ ಪರಿಹಾರವಲ್ಲ. ರಾಜಕಾಲುವೆಗಳ ನೀರು ಹರಿಸಲು ಪರ್ಯಾಯ ಜಾಗ ಲಭ್ಯವಿದ್ದಲ್ಲಿ ಮನೆ ಕೆಡಹುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅತಿವೃಷ್ಟಿ ಮತ್ತು ಪ್ರವಾಹದ ಕುರಿತು ವಿಧಾನಸಭೆಯಲ್ಲಿ ಬುಧವಾರ ನಡೆದ ಚರ್ಚೆಗೆ ಪ್ರತಿಕ್ರಿಯಿಸಿದ ಅವರು, ‘ಮಳೆನೀರು ರಾಜಕಾಲುವೆಗಳ ಮೂಲಕ ಹರಿದು ಹೋಗಬೇಕು.ಅದಕ್ಕೆ ಬೇಕಾದ ಎಲ್ಲ ಕ್ರಮಗಳನ್ನೂ ಸರ್ಕಾರ ಕೈಗೊಳ್ಳ ಲಿದೆ’ ಎಂದರು.ನೀರು ಹರಿದುಹೋಗಲು ತಡೆಯೊಡ್ಡುತ್ತಿರುವ ಕಟ್ಟಡಗಳು ಇರುವ ಜಾಗದ ಬದಲಿಗೆ ಕೆಲವು ಬಡಾವಣೆಗಳವರು ಕಾಲುವೆಗೆ ಬೇಕಾದ ಜಮೀನನ್ನು ನೀಡಲು ಮುಂದಾಗಿದ್ದಾರೆ. ಆ ರೀತಿ ನೀರು ಹರಿದುಹೋಗುವ ವ್ಯವಸ್ಥೆಯಾದರೆ ಕಟ್ಟಡಗಳನ್ನು ನೆಲಸಮ ಮಾಡಬೇಕಾದ ಪರಿಸ್ಥಿತಿ ಉದ್ಭವಿಸುವುದಿಲ್ಲ ಎಂದು ಹೇಳಿದರು.

ರಾಜಕಾಲುವೆಗಳ ಒತ್ತುವರಿ ತೆರವು ಕಾನೂನಿನ ಪ್ರಕಾರ ಮುಂದುವರಿಯಲಿದೆ. ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ ಎಂದರು.‘ಮಹಾನಗರಗಳಲ್ಲಿ ಮಳೆ ಸುರಿದಾಗ ಪ್ರವಾಹ ಉಂಟಾಗುವುದು ಸಹಜ. ಎಲ್ಲ ಮಹಾನಗರಗಳಲ್ಲೂ ಈ ಸಮಸ್ಯೆ ಇದೆ. ಈ ಬಾರಿ ಬೆಂಗಳೂರಿನಲ್ಲಿ ಹಿಂದೆಂದೂ ಆಗದಷ್ಟು ಮಳೆ ಬಿದ್ದಿದೆ. ಪ್ರವಾಹಕ್ಕೆ ಕಾರಣ ಹುಡುಕಲು ಹೊರಟರೆ ಕೊನೆ ಇರುವುದಿಲ್ಲ. ಈಗ ಸಮಸ್ಯೆ ಪರಿಹರಿಸುವುದು ಮುಖ್ಯ. ಆ ದಿಸೆಯಲ್ಲಿ ನಮ್ಮ ಸರ್ಕಾರ ಕೆಲಸ ಮಾಡಲಿದೆ’ ಎಂದು ಹೇಳಿದರು.

The post ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ appeared first on Valmiki Mithra.

]]>
5784
ಜಿಲ್ಲಾ ಪಂಚಾಯತ್ ಸಿಇಓಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ https://valmikimithra.com/archives/4676 Mon, 09 May 2022 10:04:30 +0000 https://valmikimithra.com/?p=4676 ಬೆಂಗಳೂರು: ದಕ್ಷತೆಯಿಂದ ಸಮಯ ಬದ್ಧವಾಗಿ ಕೆಲಸ ಕಾರ್ಯ ಮಾಡಿ ಎಂದು ಜಿಲ್ಲಾ ಪಂಚಾಯತ್ ಸಿಇಓಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಯಾವ ರೀತಿ ಜಿಲ್ಲಾ ಆಡಳಿತ ಚುರುಕುಗೊಳಿಸಬೇಕು ಹಾಗೂ ಜನ ಪರವಾಗಿ

The post ಜಿಲ್ಲಾ ಪಂಚಾಯತ್ ಸಿಇಓಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ appeared first on Valmiki Mithra.

]]>
ಬೆಂಗಳೂರು: ದಕ್ಷತೆಯಿಂದ ಸಮಯ ಬದ್ಧವಾಗಿ ಕೆಲಸ ಕಾರ್ಯ ಮಾಡಿ ಎಂದು ಜಿಲ್ಲಾ ಪಂಚಾಯತ್ ಸಿಇಓಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಯಾವ ರೀತಿ ಜಿಲ್ಲಾ ಆಡಳಿತ ಚುರುಕುಗೊಳಿಸಬೇಕು ಹಾಗೂ ಜನ ಪರವಾಗಿ ಇರಬೇಕು ಮತ್ತು ದಕ್ಷತೆಯಿಂದ ಕಾರ್ಯಕ್ರಮವನ್ನು ಜನರಿಗೆ ತಲುಪಿಸಬೇಕು ಎಂದು ಸಿಇಓಗಳಿಗೆ ಸೂಚಿಸಿದರು.

ಸಭೆಯ ಬಳಿಕ ಮಾತನಾಡಿದ ಸಿಎಂ ‘ವಸತಿ, ಪಡಿತರ ಹಂಚಿಕೆ, ರಸ್ತೆ, ಶಾಲೆ, ಆಸ್ಪತ್ರೆ ನಿರ್ಮಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಯೋಜನೆಗಳ ಪರಿಶೀಲನೆಯನ್ನು ಸಭೆಯಲ್ಲಿ ನಡೆಸಲಾಗಿದೆ. ದಕ್ಷತೆಯಿಂದ ಸಮಯ ಬದ್ಧವಾಗಿ ಕೆಲಸ ಕಾರ್ಯ ಮಾಡಬೇಕು ಎಂಬ ಸೂಚನೆ ನೀಡಲಾಗಿದೆ’ ಎಂದು ತಿಳಿಸಿದರು.

The post ಜಿಲ್ಲಾ ಪಂಚಾಯತ್ ಸಿಇಓಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ appeared first on Valmiki Mithra.

]]>
4676
ಉಕ್ರೇನ್‍ನಲ್ಲಿ ಉನ್ನತ ವ್ಯಾಸಂಗ ಮಾಡುತಿರುವರನು ರಾಜ್ಯಕ್ಕೆ ಕರೆತರಲು ಸರ್ವಪ್ರಯತ್ನ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ https://valmikimithra.com/archives/3783 Fri, 25 Feb 2022 05:13:17 +0000 https://valmikimithra.com/?p=3783 ಬೆಂಗಳೂರು: ಉಕ್ರೇನ್‍ನಲ್ಲಿ ರಾಜ್ಯದಿಂದ ಉನ್ನತ ವ್ಯಾಸಂಗಕ್ಕೆ ಅನೇಕ ವಿದ್ಯರ್ಥಿಗಳು ತೆರಳಿದ್ದಾರೆ. ಇದೀಗ ಅಲ್ಲಿ ಸಂಘರ್ಷಮಯ ವಾತಾವರಣ ನಿರ್ಮಾಣವಾಗಿರುವುದರಿಂದ ಕರ್ನಾಟಕದ ವಿದ್ಯಾರ್ಥಿಗಳನ್ನು ಮರಳಿ ರಾಜ್ಯಕ್ಕೆ ಕರೆತರಲು ಸರ್ವಪ್ರಯತ್ನ ಮುಂದುವರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

The post ಉಕ್ರೇನ್‍ನಲ್ಲಿ ಉನ್ನತ ವ್ಯಾಸಂಗ ಮಾಡುತಿರುವರನು ರಾಜ್ಯಕ್ಕೆ ಕರೆತರಲು ಸರ್ವಪ್ರಯತ್ನ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ appeared first on Valmiki Mithra.

]]>
ಬೆಂಗಳೂರು: ಉಕ್ರೇನ್‍ನಲ್ಲಿ ರಾಜ್ಯದಿಂದ ಉನ್ನತ ವ್ಯಾಸಂಗಕ್ಕೆ ಅನೇಕ ವಿದ್ಯರ್ಥಿಗಳು ತೆರಳಿದ್ದಾರೆ. ಇದೀಗ ಅಲ್ಲಿ ಸಂಘರ್ಷಮಯ ವಾತಾವರಣ ನಿರ್ಮಾಣವಾಗಿರುವುದರಿಂದ ಕರ್ನಾಟಕದ ವಿದ್ಯಾರ್ಥಿಗಳನ್ನು ಮರಳಿ ರಾಜ್ಯಕ್ಕೆ ಕರೆತರಲು ಸರ್ವಪ್ರಯತ್ನ ಮುಂದುವರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಜ್ಯದ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಕ್ರೇನ್ ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದಾರೆ. ಅವರ ರಕ್ಷಣೆಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಅಲ್ಲಿನ ರಾಯಭಾರಿ ಕಚೇರಿಗೆ ವಿದ್ಯಾರ್ಥಿಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ ಎಂದರು. ಈ ಮೊದಲು ಯುದ್ಧ ಆರಂಭಕ್ಕೂ ಮೊದಲೇ ತಂಡ ತಂಡವಾಗಿ ಕರೆಸಿಕೊಳ್ಳಲಾಗುತ್ತಿತ್ತು. ಆದರೆ, ಈಗ ಉಳಿದಿರುವ ವಿದ್ಯಾರ್ಥಿಗಳು ಕೊನೆಯ ತಂಡವಾಗಿದೆ. ಬಹುತೇಕ ವಿದ್ಯಾರ್ಥಿಗಳು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಯುದ್ಧ ಆರಂಭವಾದ ಕಾರಣ ಅಲ್ಲೇ ಸಿಲುಕಿದ್ದಾರೆ. ನೂರು ಮಂದಿ ಭಾರತೀಯ ವಿದ್ಯಾರ್ಥಿಗಳಲ್ಲಿ ಹತ್ತು ಜನ ನಮ್ಮ ರಾಜ್ಯದವರೇ ಆಗಿದ್ದಾರೆ. ಅವರನ್ನು ಸ್ವದೇಶಕ್ಕೆ ಕರೆತರುವ ಪ್ರಯತ್ನ ನಡೆಯುತ್ತಿದೆ. ನಮ್ಮ ವಿದೇಶಾಂಗ ಕಾರ್ಯದರ್ಶಿ ಜೊತೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದರು.

The post ಉಕ್ರೇನ್‍ನಲ್ಲಿ ಉನ್ನತ ವ್ಯಾಸಂಗ ಮಾಡುತಿರುವರನು ರಾಜ್ಯಕ್ಕೆ ಕರೆತರಲು ಸರ್ವಪ್ರಯತ್ನ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ appeared first on Valmiki Mithra.

]]>
3783
ರಾಜ್ಯ ಸರ್ಕಾರ ತನ್ನ ಆರ್ಥಿಕ ಇತಿಮಿತಿಗಳಲ್ಲಿ ನೌಕರರ ಅನುಕೂಲಕ್ಕಾಗಿ ಏಳನೇ ವೇತನ ಆಯೋಗ ರಚನೆ ಮಾಡಲು ಬಜೆಟ್ ನಲ್ಲಿ ಕ್ರಮ -ಬಸವರಾಜ ಬೊಮ್ಮಾಯಿ https://valmikimithra.com/archives/3695 Thu, 17 Feb 2022 09:58:30 +0000 https://valmikimithra.com/?p=3695 ಬೆಂಗಳೂರು:  ಮುಂಬರುವ ಬಜೆಟ್‍ನಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ಏಳನೆ ವೇತನ ಆಯೋಗ ರಚನೆ ಮಾಡುವ ಸಾಧ್ಯತೆಯ ಸುಳಿವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದಾರೆ. ರಾಜ್ಯ ಸರ್ಕಾರ ಐದಾರು ವರ್ಷಗಳಿಗೊಮ್ಮೆ ವೇತನ

The post ರಾಜ್ಯ ಸರ್ಕಾರ ತನ್ನ ಆರ್ಥಿಕ ಇತಿಮಿತಿಗಳಲ್ಲಿ ನೌಕರರ ಅನುಕೂಲಕ್ಕಾಗಿ ಏಳನೇ ವೇತನ ಆಯೋಗ ರಚನೆ ಮಾಡಲು ಬಜೆಟ್ ನಲ್ಲಿ ಕ್ರಮ -ಬಸವರಾಜ ಬೊಮ್ಮಾಯಿ appeared first on Valmiki Mithra.

]]>
ಬೆಂಗಳೂರು:  ಮುಂಬರುವ ಬಜೆಟ್‍ನಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ಏಳನೆ ವೇತನ ಆಯೋಗ ರಚನೆ ಮಾಡುವ ಸಾಧ್ಯತೆಯ ಸುಳಿವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದಾರೆ.

ರಾಜ್ಯ ಸರ್ಕಾರ ಐದಾರು ವರ್ಷಗಳಿಗೊಮ್ಮೆ ವೇತನ ಆಯೋಗವನ್ನು ರಚನೆ ಮಾಡಿ ವೇತನ ಪರಿಷ್ಕರಣೆ ಮಾಡುತ್ತಿದೆ. 2018ರಲ್ಲಿ ಅನುಷ್ಠಾನಕ್ಕೆ ಬಂದು ಆರನೇ ವೇತನ ಆಯೋಗ ಪ್ರಸ್ತುತ ಜರಿಯಲ್ಲಿದೆ. ಕೇಂದ್ರ ಸರ್ಕಾರದಲ್ಲಿ ಏಳನೇ ವೇತನ ಆಯೋಗ ಜಾರಿಯಲ್ಲಿದೆ. ರಾಜ್ಯ ಸರ್ಕಾರ ತನ್ನ ಆರ್ಥಿಕ ಇತಿಮಿತಿಗಳಲ್ಲಿ ನೌಕರರ ಅನುಕೂಲಕ್ಕಾಗಿ ಏಳನೇ ವೇತನ ಆಯೋಗ ರಚನೆ ಮಾಡಲು ಬಜೆಟ್ ನಲ್ಲಿ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ರಾಜ್ಯ ಸರ್ಕಾರಿ ನೌಕರರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಕೋವಿಡ್ ನಂತಹ ಸಂಕಷ್ಟ ಸಂದರ್ಭದಲ್ಲಿ ಅವರ ಕರ್ತವ್ಯ ನಿರ್ವಹಣೆ ಶ್ಲಾಘನೀಯ. ಒಬ್ಬೊಬ್ಬರು ಎರಡು ಮೂರು ಹುದ್ದಾಗಳನ್ನು ನಿಭಾಯಿಸಿದ್ದಾರೆ. ಸರ್ಕಾರದಲ್ಲಿ ಖಾಲಿ ಇರುವ ಹುದ್ದಾಗಳ ನೇಮಕಾತಿಗೆ ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ ಎಂದರು.

ಕೋವಿಡ್ ನಿಂದಾಗಿ ನೇಮಕಾತಿಗೆ ನಿರ್ಬಂಧಗಳನ್ನು ವಿಧಿಸಲಾಗಿತ್ತು. ಹಂತ ಹಂತವಾಗಿ ಅದನ್ನು ಸಡಿಲಗೊಳಿಸುತ್ತಿದ್ದೇವೆ. ಅಗತ್ಯ ಇರುವ ಕಡೆ ನೇಮಕಾತಿಗಳಿಗೆ ಅವಕಾಶ ನೀಡುತ್ತಿದ್ದು, ಹೊಸ ಹುದ್ದಾಗಳ ಸೃಷ್ಟಿಸುವ ಪ್ರಕ್ರಿಯೆಯೂ ನಡೆಯುತ್ತಿದೆ ಎಂದು ವಿವರಿಸಿದರು.

The post ರಾಜ್ಯ ಸರ್ಕಾರ ತನ್ನ ಆರ್ಥಿಕ ಇತಿಮಿತಿಗಳಲ್ಲಿ ನೌಕರರ ಅನುಕೂಲಕ್ಕಾಗಿ ಏಳನೇ ವೇತನ ಆಯೋಗ ರಚನೆ ಮಾಡಲು ಬಜೆಟ್ ನಲ್ಲಿ ಕ್ರಮ -ಬಸವರಾಜ ಬೊಮ್ಮಾಯಿ appeared first on Valmiki Mithra.

]]>
3695
ಧರ್ಮದ ಆಚರಣೆ ಎಂದು ಹೇಳಿಕೊಂಡು ತರಗತಿಯೊಳಗೆ ಹಿಜಾಬ್ ಧರಿಸಿಕೊಂಡು ಬರುತ್ತೇವೆ ಎನ್ನುತ್ತಾರೆ -ಬಸವರಾಜ ಬೊಮ್ಮಾಯಿ https://valmikimithra.com/archives/3565 Wed, 09 Feb 2022 19:03:41 +0000 https://valmikimithra.com/?p=3565 ಹಿಜಾಬ್ ಮತ್ತು ಕೇಸರಿ ಶಾಲು ನಡುವೆ ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಚಿವರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದರು. ನಿನ್ನೆ ರಾಜ್ಯದ 18 ಜಿಲ್ಲೆಗಳ 55

The post ಧರ್ಮದ ಆಚರಣೆ ಎಂದು ಹೇಳಿಕೊಂಡು ತರಗತಿಯೊಳಗೆ ಹಿಜಾಬ್ ಧರಿಸಿಕೊಂಡು ಬರುತ್ತೇವೆ ಎನ್ನುತ್ತಾರೆ -ಬಸವರಾಜ ಬೊಮ್ಮಾಯಿ appeared first on Valmiki Mithra.

]]>
ಹಿಜಾಬ್ ಮತ್ತು ಕೇಸರಿ ಶಾಲು ನಡುವೆ ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಚಿವರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದರು.

ನಿನ್ನೆ ರಾಜ್ಯದ 18 ಜಿಲ್ಲೆಗಳ 55 ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಧರಿಸುವ ಕುರಿತು ದೊಡ್ಡ ಸಂಘರ್ಷವೇ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ಇಂದಿನಿಂದ ಅನ್ವಯವಾಗುವಂತೆ ಮೂರು ದಿನ ರಜೆ ಘೋಷಿಸಲಾಗಿದೆ. ನವದೆಹಲಿಯಿಂದ ರಾತ್ರಿ ತಡವಾಗಿ ಬೆಂಗಳೂರಿಗೆ ಆಗಮಿಸಿದ ಸಿಎಂ ಬೊಮ್ಮಾಯಿ ಅವರಿಗೆ ಇಂದು ಸಚಿವರು ಮತ್ತು ಅಧಿಕಾರಿಗಳು ಘಟನೆ ಬಗ್ಗೆ ಸಂಪೂರ್ಣವಾಗಿ ಮಾಹಿತಿ ನೀಡಿದ್ದಾರೆ.

ಉಡುಪಿ ಜಿಲ್ಲೆಯ ಕುಂದಾಪುರದಿಂದ ಆರಂಭವಾಗಿ ದಕ್ಷಿಣ ಕನ್ನಡ, ಮಡಿಕೇರಿ, ಮಂಡ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಬೆಳಗಾವಿ, ಬಾಗಲಕೋಟೆ ಸೇರಿದಂತೆ ಒಟ್ಟು 18 ಜಿಲ್ಲೆಗಳಲ್ಲಿ ಸಂಘರ್ಷಕ್ಕೆ ಕಾರಣವಾಗಿದೆ. ಸಮವಸ್ತ್ರ ಪಾಲನೆ ಮಾಡುವಂತೆ ವಿದ್ಯಾರ್ಥಿಗಳಿಗೆ ಹೇಳಿದರೂ ಕೆಲವರು ಧರ್ಮದ ಆಚರಣೆ ಎಂದು ಹೇಳಿಕೊಂಡು ತರಗತಿಯೊಳಗೆ ಹಿಜಾಬ್ ಧರಿಸಿಕೊಂಡು ಬರುತ್ತೇವೆ ಎನ್ನುತ್ತಾರೆ.

ಸಚಿವ ನಾಗೇಶ್ ಕೂಡ ಪ್ರಸ್ತುತ ಘಟನೆಯ ಬಗ್ಗೆ ಸಿಎಂಗೆ ಸಂಪೂರ್ಣವಾದ ವಿವರ ನೀಡಿದರು. ಕೆಲವು ಕಡೆ ಸಮವಸ್ತ್ರ ಧರಿಸಿಯೇ ಬರುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಸಂಘಟನೆಗಳ ಕೈವಾಡವೂ ಇದೆ. ಶಾಲಾ ಆಡಳಿತ ಮಂಡಳಿಯವರು ಸಮವಸ್ತ್ರ ಧರಿಸಿಕೊಂಡು ಬರುವಂತೆ ಮನವೊಲಿಸಿದರೂ ಕೇಳುತ್ತಿಲ್ಲ. ಇದರಿಂದ ಪರಿಸ್ಥಿತಿ ಬಿಗಡಾಯಿಸಿದೆ ಎಂದು ಹೇಳಿದ್ದಾರೆ.

 

 

The post ಧರ್ಮದ ಆಚರಣೆ ಎಂದು ಹೇಳಿಕೊಂಡು ತರಗತಿಯೊಳಗೆ ಹಿಜಾಬ್ ಧರಿಸಿಕೊಂಡು ಬರುತ್ತೇವೆ ಎನ್ನುತ್ತಾರೆ -ಬಸವರಾಜ ಬೊಮ್ಮಾಯಿ appeared first on Valmiki Mithra.

]]>
3565
ಎಲ್ಲವೂ ವರಿಷ್ಠರು ತೆಗೆದುಕೊಳ್ಳುವ ನಿರ್ಣಯದ ಮೇಲೆ ಅವಲಂಬಿತವಾಗಿದೆ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ https://valmikimithra.com/archives/3034 Mon, 24 Jan 2022 10:20:42 +0000 https://valmikimithra.com/?p=3034 ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಬೇಕು, ವರಿಷ್ಠರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ನನಗೆ ಮಾಹಿತಿ ಇಲ್ಲ. ಎಲ್ಲವೂ ವರಿಷ್ಠರು ತೆಗೆದುಕೊಳ್ಳುವ ನಿರ್ಣಯದ ಮೇಲೆ ಅವಲಂಬಿತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು

The post ಎಲ್ಲವೂ ವರಿಷ್ಠರು ತೆಗೆದುಕೊಳ್ಳುವ ನಿರ್ಣಯದ ಮೇಲೆ ಅವಲಂಬಿತವಾಗಿದೆ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ appeared first on Valmiki Mithra.

]]>
ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಬೇಕು, ವರಿಷ್ಠರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ನನಗೆ ಮಾಹಿತಿ ಇಲ್ಲ. ಎಲ್ಲವೂ ವರಿಷ್ಠರು ತೆಗೆದುಕೊಳ್ಳುವ ನಿರ್ಣಯದ ಮೇಲೆ ಅವಲಂಬಿತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಸದ್ಯಕ್ಕೆ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಇವೆ. ಶಾಸಕರು ಇವುಗಳನ್ನು ಭರ್ತಿ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಸಂಪುಟ ರಚನೆಯಾಗಬೇಕು ಎಂದು ಹೇಳುವುದು ತಪ್ಪಲ್ಲ. ಅದು ಶಾಸಕರ ಹಕ್ಕು ಕೂಡ ಎಂದು ಅಭಿಪ್ರಾಯಪಟ್ಟರು.

ಸಂಪುಟ ವಿಸ್ತರಣೆ ಕುರಿತಂತೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ. ಪಕ್ಷದ ನಾಯಕರು ನನ್ನನ್ನು ಕರೆದರೆ ಇಲ್ಲವೇ ವಿಸ್ತರಣೆ ಮಾಡಬೇಕೆಂದು ಸ್ಥಳೀಯ ನಾಯಕರು ಸೂಚಿಸಿದರೂ ಅವರ ಬಳಿಯೂ ಮಾತುಕತೆ ನಡೆಸಿ ವಿಸ್ತರಣೆ ಮಾಡಲಾಗುವುದು. ಇದರಲ್ಲಿ ನನಗೆ ಯಾರಿಂದಲೂ ಒತ್ತಡವಿಲ್ಲ ಎಂದು ಸ್ಪಷ್ಟಪಡಿಸಿದರು.

ನಿಗಮಮಂಡಳಿಗೆ ಅಧ್ಯಕ್ಷರ ನೇಮಕ ಮಾಡುವ ಬಗ್ಗೆ ಚರ್ಚೆಯಾಗಿಲ್ಲ. ಪಕ್ಷದ ವೇದಿಕೆಯಲ್ಲೂ ಈ ಬಗ್ಗೆ ಮಾತುಕತೆ ನಡೆದಿಲ್ಲ. ಒಂದು ವೇಳೆ ನಮ್ಮ ಪಕ್ಷದ ರಾಜ್ಯಾಧ್ಯಕ್ಷರಿಂದ ನೇಮಕ ಮಾಡಬೇಕೆಂದು ಸೂಚಿಸಿದರೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು. ಬಜೆಟ್ ಮಂಡನೆ ಕುರಿತಂತೆ ಈಗಾಗಲೇ ಎಲ್ಲ ರೀತಿಯ ಪೂರ್ವ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಹಿಂದೆಯೇ ನಾನು ಅಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದಿದ್ದೆನು. ರಾಜ್ಯದಲ್ಲಿ 3ನೇ ಕೋವಿಡ್ ಅಲೆ ಬಂದಿದ್ದರಿಂದ ಈ ಸಭೆ ನಡೆಯಲು ವಿಳಂಬವಾಗಿದೆ ಎಂದರು.

The post ಎಲ್ಲವೂ ವರಿಷ್ಠರು ತೆಗೆದುಕೊಳ್ಳುವ ನಿರ್ಣಯದ ಮೇಲೆ ಅವಲಂಬಿತವಾಗಿದೆ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ appeared first on Valmiki Mithra.

]]>
3034
ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರು ಜಿಲ್ಲಾಧಿಕಾರಿಗಳೊಂದಿಗೆ ಮಹತ್ವದ ಸಭೆ https://valmikimithra.com/archives/2897 Tue, 18 Jan 2022 10:15:38 +0000 https://valmikimithra.com/?p=2897 ಬೆಂಗಳೂರು:  ಸಂಜೆ 4 ಗಂಟೆಗೆ ರಾಜ್ಯದ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನರೆನ್ಸ್ ನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ನಡೆಸಲಿದ್ದಾರೆ. ಆಯಾ ಜಿಲ್ಲೆಗಳ ಕೋವಿಡ್ ಪ್ರಕರಣಗಳ ಸಂಖ್ಯೆ, ಸಾವಿನ ಪ್ರಮಾಣ, ಓಮಿಕ್ರಾನ್,

The post ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರು ಜಿಲ್ಲಾಧಿಕಾರಿಗಳೊಂದಿಗೆ ಮಹತ್ವದ ಸಭೆ appeared first on Valmiki Mithra.

]]>
ಬೆಂಗಳೂರು:  ಸಂಜೆ 4 ಗಂಟೆಗೆ ರಾಜ್ಯದ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನರೆನ್ಸ್ ನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ನಡೆಸಲಿದ್ದಾರೆ.

ಆಯಾ ಜಿಲ್ಲೆಗಳ ಕೋವಿಡ್ ಪ್ರಕರಣಗಳ ಸಂಖ್ಯೆ, ಸಾವಿನ ಪ್ರಮಾಣ, ಓಮಿಕ್ರಾನ್, ಪಾಸಿವಿಟಿ ದರ, ಆಸ್ಪತ್ರೆಯಲ್ಲಿ ಬೆಡ್‍ಗಳ ಲಭ್ಯತೆ, ಶಾಲಾಕಾಲೇಜುಗಳ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

ನಿನ್ನೆಯಷ್ಟೇ ಸಚಿವರು ಮತ್ತು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ನಡೆಸಿದ್ದ ಸಿಎಂ ಅವರು ಇಂದು ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸುತ್ತಿರುವುದು ಮಹತ್ವ ಪಡೆದುಕೊಂಡಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಈ ತಿಂಗಳ 25ಕ್ಕೆ ಉಚ್ಛ್ರಾಯ ಸ್ಥಿತಿಗೆ ತಲುಪಲಿದೆ ಎಂದು ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಎಚ್ಚರಿಸಿದೆ. ಅಲ್ಲಿಯವರೆಗೂ ಈಗಿರುವ ಯಾವುದೇ ನಿಯಮಗಳಲ್ಲಿ ಬದಲಾವಣೆ ಮಾಡದಂತೆ ಸಲಹೆಯನ್ನು ಮಾಡಿದೆ.

The post ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರು ಜಿಲ್ಲಾಧಿಕಾರಿಗಳೊಂದಿಗೆ ಮಹತ್ವದ ಸಭೆ appeared first on Valmiki Mithra.

]]>
2897